ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಸಿಎಂ ಸೂಚನೆ

Date:

Advertisements

ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿದ ಪ್ರಗತಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಸರ್ಕಾರದ ಕಾನೂನುಗಳನ್ನು ಎಲ್ಲ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.

ಸರ್ಕಾರಕ್ಕೆ ಅನುಕೂಲಕರವಾದ ಪ್ರಕರಣಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಯಾಕೆ? ಅನೇಕ ಪ್ರಕರಣಗಳಲ್ಲಿ ಸರ್ಕಾರದ ವಿರುದ್ಧ ಯಾಕೆ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ? ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಯಾಕೆ ಹೆಚ್ಚಾಗುತ್ತಿವೆ? ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

Advertisements

ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗುರವಾಗುವಂತಹ ಬೆಳವಣಿಗೆಗಳು ಆಗಿವೆ. ನಿಮ್ಮ ತಪ್ಪುಗಳಿಂದ ಸರ್ಕಾರಕ್ಕೆ ಮುಜುಗುರವುಂಟಾಗುವ ಪರಿಸ್ಥಿತಿ ಬರಬಾರದು. ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

ಸಂಪೂರ್ಣ ಸಿದ್ಧತೆಯೊಂದಿಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬೇಕು. ಮೆರಿಟ್‌ ಇರುವ ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಲು ಅವಕಾಶ ನೀಡಬಾರದು. ಪ್ರತಿಯೊಂದು ಪ್ರಕರಣಗಳನ್ನು ಸವಾಲಿನಿಂದ ಸ್ವೀಕರಿಸಿ, ಕಾರ್ಯನಿರ್ವಹಿಸಿದರೆ ಸರ್ಕಾರಕ್ಕೆ ಉತ್ತಮ ಹೆಸರು ಬರಲು ಸಾಧ್ಯವಿದೆ. ನಿಮ್ಮಿಂದ ಹೆಚ್ಚಿನ ಕ್ರಿಯಾಶೀಲ ಕಾರ್ಯನಿರ್ವಹಣೆಯನ್ನು ಸರ್ಕಾರ ಅಪೇಕ್ಷಿಸುತ್ತದೆ. ಇಲಾಖೆಗಳಿಂದ ಅಥವಾ ಅಧಿಕಾರಿಗಳಿಂದ ಸರಿಯಾಗಿ ಸ್ಪಂದನೆ ದೊರೆಯದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ಸಿಎಂ ಹೇಳಿದರು.

ಎಲ್ಲ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳಿಗೆ ಇಲಾಖಾವಾರು ಕಾರ್ಯಕ್ಷೇತ್ರವನ್ನು ನಿಗದಿಪಡಿಸಬೇಕು. ನ್ಯಾಯಾಂಗದಲ್ಲಿನ ಎಲ್ಲ ಅಡ್ಡಿಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ. ರಾಜ್ಯ ಸರ್ಕಾರದ ಪರವಾದ ನ್ಯಾಯಾಂಗ ಹೋರಾಟಗಳನ್ನು ಇನ್ನಷ್ಟು ವೃತ್ತಿಪರಗೊಳಿಸುವ ಅಗತ್ಯವಿದೆ. ರಾಜ್ಯ ಸರ್ಕಾರದ 21799 ಪ್ರಕರಣಗಳು ಹೈಕೋರ್ಟ್‌ನಲ್ಲಿ ಬಾಕಿಯಿವೆ. ಇದರಲ್ಲಿ 5016 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಇದನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯ ಕಾರ್ಯದರ್ಶಿಯವರು ಎಲ್ಲ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಅವರ ಸಭೆಯನ್ನು ಕರೆದು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಅಡ್ವೊಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳು ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X