ಕೊಪ್ಪಳ | ಸೌರ ಕೃಷಿಯಿಂದ ತಲಾದಾಯ ಹೆಚ್ಚಾಗಲಿದೆ; ಡಿಸಿ ಸುರೇಶ ಬಿ ಹಿಟ್ನಾಳ್

Date:

Advertisements

ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಹಾಗೂ ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಬಿ ಹಿಟ್ನಾಳ್ ಹೇಳಿದರು.

ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಸೆಲ್ಕೋ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ “ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಹಿಂದುಳಿದ ಪ್ರದೇಶವಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಜನರು ಕೃಷಿ ಅವಲಂಭಿತರಾಗಿದ್ದು, ಶೇ. 75ರಷ್ಟು ಒಣ ಬೆಸಾಯ ಹಾಗೂ ಶೇ. 25ರಷ್ಟು ಮಾತ್ರ ನೀರಾವರಿ ಹೊಂದಿದೆ. ಮಳೆಯಾಶ್ರಿತ ಅಥವಾ ನೀರಾವರಿ ಯಾವುದೇ ಬೆಳೆಯಾಗಿರಲಿ ರೈತರಿಗೆ ಉತ್ತಮ ಬೆಲೆ ಸಿಗುವಂತಾಗಬೇಕು. ರೈತರು ಶ್ರಮವಹಿಸಿ ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ನಿರೀಕ್ಷೆಯಂತೆ ಬೆಲೆ ಸಿಗುವುದಿಲ್ಲ. ರೈತರು ತಮ್ಮ ಬೆಳೆಗಳಿಂದ ವಿವಿಧ ಬಗೆಯ ಉತ್ಪನ್ನಗಳನ್ನು ಸಿದ್ದಪಡಿಸಿ ಮಾರಾಟ ಮಾಡಿದರೆ, ಅದಕ್ಕೆ ಹೆಚ್ಚಿನ ಮೌಲ್ಯ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮೌಲ್ಯವರ್ಧನೆಗೆ ನಾವು ಹೆಚ್ಚಿನ ಒತ್ತು ಕೊಡಬೇಕು. ಅಂದಾಗ ಮಾತ್ರ ರೈತರು ಬೆಳೆದ ಬೆಳೆಗಳಿಗೆ ಇನ್ನೂ ಹೆಚ್ಚಿನ ಬೆಲೆ ಸಿಗಲು ಸಾಧ್ಯವಾಗಲಿದೆ. ರೈತರು ಸೌರ ಶಕ್ತಿಯಿಂದ ಬಳಕೆಯಾಗುವ ಕೃಷಿ ಯಂತ್ರೋಪಕರಣಗಳು ಹಾಗೂ ಇತರ ಉತ್ಪನ್ನಗಳ ಬಳಕೆ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು. ಮೇಣದ ಬತ್ತಿ ಉತ್ಪಾದನೆ, ರೊಟ್ಟಿ ತಯಾರಿಕೆ, ಶ್ಯಾವಿಗೆ, ಚಕ್ಕುಲಿ, ಆಲುಗಡ್ಡೆ ಚಿಪ್ಸ್ ಹಾಗೂ ಇತರೆ ಆಹಾರ ಪದಾರ್ಥಗಳನ್ನು ತಯಾರಿಸುವ ಸೌರ ಶಕ್ತಿಯ ಯಂತ್ರೋಪಕರಣಗಳನ್ನು ಕೃಷಿ ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಬಳಕೆ ಮಾಡಿಕೊಂಡರೆ ಎಲ್ಲರಿಗೂ ಜೀವನೋಪಾಯವಾಗಲಿದೆ” ಎಂದರು.

Advertisements

“ಸೆಲ್ಕೋ ಫೌಂಡೇಶನ್ ಜೊತೆಗೆ ಸುಮಾರು ಮೂರು ವರ್ಷಗಳಿಂದ ನನಗೆ ಸಂಪರ್ಕವಿದ್ದು, ಈ ಹಿಂದೆ ದಾವಣಗೆರೆ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸಂದರ್ಭದಲ್ಲಿ ಇವರ ಜೊತೆಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಸ್ಮಾರ್ಟ್ ಕ್ಲಾಸ್, ಆರೋಗ್ಯ ಕೇಂದ್ರಕ್ಕೆ ಸೋಲಾರ್ ಅಳವಡಿಕೆ ಮತ್ತು ಪಿಎಂಎಫ್ಎಫ್ ಯೋಜನೆಯಡಿ ಕಿರು ಸಂಸ್ಕರಣೆ, ಎನ್ಆರ್‌ಎಲ್ಎಂ, ವನಧನ ವಿಕಾಸ ಕೇಂದ್ರ ಹೀಗೆ ಎಲ್ಲದರಲ್ಲೂ ಸೋಲಾರ ಬಳಕೆಗಾಗಿ ಉತ್ತೇಜನವನ್ನು ಕೊಟ್ಟಿದ್ದೇವೆ” ಎಂದರು.

ಸೆಲ್ಕೋ ಫೌಂಡೇಶನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಹಂದೆ ಮಾತನಾಡಿ, “ಸೌರ ಶಕ್ತಿ ಬಳಕೆಯಲ್ಲಿ ವಿವಿಧ ತಂತ್ರಜ್ಞಾನಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ಇಂದಿನ ಕೃಷಿ ಮತ್ತು ಉದ್ಯೋಗದಲ್ಲಿ ಸೌರ ಶಕ್ತಿಯ ಬಳಕೆ ಅತ್ಯವಶ್ಯಕವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಒಂದು ವರ್ಷದೊಳಗೆ ಒಂದು ಸಾವಿರ ಸೌರ ಶಕ್ತಿ ಚಾಲಿತ ಸಿರಿಧಾನ್ಯ ಸಂಸ್ಕರಣ ಘಟಕಗಳ ಸ್ಥಾಪನೆ ಗುರಿಯನ್ನು ಹೊಂದಲಾಗಿದೆ. ಇದರಿಂದ ಕೊಪ್ಪಳ ಜಿಲ್ಲೆಯು ಇಡೀ ದೇಶಕ್ಕೆ ಮಾದರಿಯಾಗಲಿದೆ. ಸೌರ ಯಂತ್ರೋಪಕರಣಗಳ ಬಳಕೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ನಮ್ಮ ಸಂಸ್ಥೆಯ ಪ್ರತಿನಿಧಿಗಳಿಗೆ ಹೇಳಿ, ಅವರು ತ್ವರಿತವಾಗಿ ಸರಿಪಡಿಸುವ ಕೆಲಸವನ್ನು ಮಾಡುವರು” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಸಾಲಬಾಧೆ : ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಮಾತನಾಡಿ, “ಸೌರ ಶಕ್ತಿ ಬಳಕೆಯಿಂದ ಕೃಷಿಗೆ ಸಂಬಂಧಿಸಿದ ಯಂತ್ರಗಳು, ಸ್ವಯಂ ಉದ್ಯೋಗಕ್ಕಾಗಿ ಬೇಕಾಗುವ ಯಂತ್ರೋಪಕರಣಗಳನ್ನು ಸಹಾಯಧನ ರೂಪದಲ್ಲಿ ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರಿಗೆ ಮತ್ತು ಸ್ವ ಸಹಾಯ ಗುಂಪಿನ ಮಹಿಳೆಯರು ಸೌರ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ತಮ್ಮ ಆದಾಯವನ್ನು ಮತ್ತಷ್ಟು ಬಲ ಪಡಿಸಿಕೊಳ್ಳಬಹುದಾಗಿದೆ” ಎಂದರು.

ಗಮನ ಸೆಳೆದ ಪ್ರದರ್ಶನ ಮಳಿಗೆಗಳು

ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವದಲ್ಲಿ ಕೃಷಿಗೆ ಸಂಬಂಧಿಸಿದ ಸೌರ ಶಕ್ತಿಯ ಯಂತ್ರಗಳಾದ ಮಿನಿ ಟ್ರ್ಯಾಕ್ಟರ್, ರೈತರ ಬೆಳೆಗಳಿಗೆ ರಾಸಾಯನಿಕ ಸಿಂಪಡಿಸುವ ಡ್ರೋನ್ ಯಂತ್ರ, ಭತ್ತದ ಮಿಲ್ಲಿಂಗ್ ಕಿರು ಯಂತ್ರಗಳು, ಎಣ್ಣೆ ಗಾಣದ ಯಂತ್ರ ಮತ್ತು ಇತರೆ ಕೃಷಿ ಯಂತ್ರೋಪಕರಣಗಳು ಹಾಗೂ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದ ಶ್ಯಾವಿಗೆ, ಚಕ್ಕುಲಿ, ಆಲುಗಡ್ಡೆ ಚಿಪ್ಸ್ ತಯಾರಿಕೆಯ ಸೌರ ಶಕ್ತಿಯ ಯಂತ್ರಗಳು ಹಾಗೂ ಸಿರಿಧಾನ್ಯ ಮಳಿಗೆ ಪ್ರದರ್ಶನಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಿದರು.

WhatsApp Image 2025 06 26 at 6.32.26 PM

ಕಾರ್ಯಕ್ರಮದಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ನಬಾರ್ಡ್ ಕಾರ್ಯಕ್ರಮ ಅಧಿಕಾರಿ ಮಾಹದೇವ ಕೀರ್ತಿ, ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ಡಾ. ಎಂ.ವಿ ರವಿ, ಶ್ರೀನಿವಾಸ ಕುಲಕರ್ಣಿ, ಡಾ. ಎಂ.ಪಿ ಪಾಟೀಲ್, ಪ್ರಗತಿಪರ ರೈತರಾದ ಡಾ. ದೇವೇಂದ್ರಪ್ಪ ಬಳೂಟಗಿ, ಕೃಷಿಕ ಮಹಿಳೆಯರಾದ ಮಂಗಳ, ಗೀತಾ ಸಜ್ಜನ್, ಸೆಲ್ಕೊ ಫೌಂಡೇಶನ್ ತಂತ್ರಜ್ಞರು, ಜಿಲ್ಲೆಯ ರೈತರು, ಸಂಜೀವಿನಿ ಮತ್ತು ಎನ್.ಆರ್.ಎಲ್.ಎಂ, ಸ್ವಸಹಾಯ ಗುಂಪುಗಳ ಸದಸ್ಯರು ಕೃಷಿ ಇಲಾಖೆಯ ಅಧಿಕಾರಿಗಳು ಸೆಲ್ಕೋ ಫೌಂಡೇಶನ್ ಪ್ರತಿನಿಧಿಗಳು ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X