ಇಡಿ, ಸಿಬಿಐ, ಐಟಿ ಇಲಾಖೆಗಳೇ ಎನ್‌ಡಿಎ ನಿಜವಾದ ಶಕ್ತಿ: ಉದ್ಧವ್ ಠಾಕ್ರೆ ವಾಗ್ದಾಳಿ

Date:

Advertisements

ಬಿಜೆಪಿ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆಯಂತಹ ಕೇಂದ್ರೀಯ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ 63 ನೇ ಹುಟ್ಟುಹಬ್ಬದ ಮುನ್ನಾದಿನದಂದು ಶಿವಸೇನಾ (ಯುಬಿಟಿ) ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿರುವ ಉದ್ಧವ್ ಠಾಕ್ರೆ, “ಇಡಿ, ಸಿಬಿಐ, ಐಟಿ ಇಲಾಖೆಗಳು ಎನ್‌ಡಿಎಯ ನಿಜವಾದ ಶಕ್ತಿಯಾಗಿವೆ. ಕಳೆದ ವಾರ, ‘ಎನ್‌ಡಿಎ’ ಹೆಸರಿನ ‘ಅಮೀಬಾ’ ಜೀವಂತವಾಗಿದೆ ಎಂದು ನಮಗೆ ತಿಳಿಯಿತು. ದೇಶವನ್ನು ಪ್ರೀತಿಸುವ ಜನರು ‘ಇಂಡಿಯಾ’ ಒಕ್ಕೂಟವನ್ನು ರಚಿಸಿದ್ದಾರೆ. ತಮ್ಮ ಬಳಿ 36 ಪಕ್ಷಗಳಿವೆ ಎಂದು ಎನ್‌ಡಿಎ ಹೇಳುತ್ತಿದೆ. ಆದರೆ ಅವರಿಗೆ ನಿಜವಾಗಿಯೂ 36 ಪಕ್ಷಗಳ ಅಗತ್ಯವಿಲ್ಲ. ಎನ್‌ಡಿಎ ಈಗ ಮೂರು ಪ್ರಬಲ ಪಕ್ಷಗಳನ್ನು ಹೊಂದಿದ್ದು, ಅವುಗಳು ಇಡಿ, ಸಿಬಿಐ ಮತ್ತು ಐಟಿ ಮಾತ್ರ“ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಣಿಪುರದ ಪರಿಸ್ಥಿತಿ, ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನ, ಏಕನಾಥ್ ಶಿಂಧೆ ಅವರ ಬಂಡಾಯ ಸೇರಿದಂತೆ ಹಲವಾರು ವಿಷಯಗಳ ಕುರಿತು ಉದ್ಧವ್ ಠಾಕ್ರೆ ಮಾತನಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಆರ್‌ಎಸ್‌ ಅವಿಶ್ವಾಸ ನಿರ್ಣಯ ಮಂಡನೆ

ಶಿವಸೇನೆ ಹೆಸರು ಮತ್ತು ಚಿಹ್ನೆಯ ಬಗ್ಗೆ ಮಾತನಾಡಿದ ಉದ್ಧವ್, “ನನ್ನ ಗುರುತು ಏನೆಂದರೆ, ನಾನು ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆಯವರ ಮಗ. ಬಾಳಾಸಾಹೇಬರ ಪರಂಪರೆಯನ್ನು ನಾನು ಮುಂದುವರಿಸಿಕೊಂಡು ಹೋಗಬಲ್ಲೆ ಎಂಬ ವಿಶ್ವಾಸವನ್ನು ನನಗೆ ಜನ ನೀಡಿದ್ದಾರೆ” ಎಂದು ಹೇಳಿದರು.

“ನಾನು ಬಿಜೆಪಿಗೆ ವಂಚಿಸಿದ್ದೇನೆ ಎಂದು ಹೇಳುತ್ತಾರೆ. ಆದರೆ ಈಗ ಎನ್‌ಸಿಪಿ ಏಕೆ ಇಬ್ಬಾಗವಾಯಿತು. ನೀವು ಈಗಾಗಲೇ ಶಿವಸೇನೆಯನ್ನು ಒಡೆಯುವ ಮೂಲಕ ಸರ್ಕಾರವನ್ನು ರಚಿಸಿದ್ದೀರಿ” ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ದೇಶದ ಇತಿಹಾಸಕ್ಕೆ 2024ರ ವರ್ಷ ಬಹಳ ಮುಖ್ಯ ಎಂದು ನಾನು ಹೇಳುತ್ತೇನೆ. ಮತ್ತೊಮ್ಮೆ ಈ ಸರ್ಕಾರ ಬಂದರೆ, ಪ್ರಜಾಪ್ರಭುತ್ವ ಜೀವಂತವಾಗಿದೆಯೇ ಮತ್ತು ಮತ್ತೆ ಚುನಾವಣೆಗಳು ನಡೆಯುತ್ತವೆಯೇ ಎಂದು ನನಗೆ ಅನುಮಾನವಿದೆ. ನಾವು ಸಂವಿಧಾನವನ್ನು ಅನುಸರಿಸುತ್ತೇವೆ. ಸರ್ಕಾರಕ್ಕೆ ಹಾಗೂ ಬಿಜೆಪಿಯವರಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X