ಶಿವಮೊಗ್ಗ | ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ : ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

Date:

Advertisements

ಶಿವಮೊಗ್ಗ ಜಿಲ್ಲೆಯ ಹೊಸನಗರದ ರಿಪ್ಪನ್ ಪೇಟೆಯಲ್ಲಿ ಮಾತನಾಡಿದ ಇವರುಗಳು ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು.

ಹೊಂಬುಜ ಮಠದ ಆವರಣದಲ್ಲಿ ನಡೆಯುತ್ತಿರುವ 10 ದಿನಗಳ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಗೃಹ ರಕ್ಷಕ ದಳವನ್ನು 1962ರಲ್ಲಿ ಸ್ಥಾಪನೆ ಮಾಡಲಾಯಿತು. ಅಂದಿನಿಂದ ಇಂದಿನವರೆಗೆ ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಿಂದೆ ಸ್ವಯಂ ಸೇವಕರಾಗಿ ದುಡಿಯಲು ಗೃಹರಕ್ಷಕ ದಳಕ್ಕೆ ಸೇರುವ ಜನರ ಸಂಖ್ಯೆ ವಿರಳವಾಗಿತ್ತು.

ಆದರೆ ಕಾಲಕ್ರಮೇಣ ಭಾರತೀಯ ಸೈನ್ಯ, ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇದ್ದು, ಅವಕಾಶದಿಂದ ವಂಚಿತರಾದವರು, ಗೃಹರಕ್ಷಕ ಸೇರಿದರೆ ಸೈನಿಕ, ಪೊಲೀಸರಂತೆ ಕೆಲಸ ಮಾಡಬಹುದು ಎಂಬ ದೃಷ್ಟಿಯಿಂದ ಇತ್ತೀಚಿನ ದಿನಗಳಲ್ಲಿ ಗೃಹರಕ್ಷಕ ದಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ ಎಂದರು.

Advertisements

ಗೃಹರಕ್ಷಕ ದಳದಲ್ಲಿ ಹೆಚ್ಚಿನ ಶಿಸ್ತು ಅಗತ್ಯವಿದೆ. ಪ್ರತಿ ವಾರದ ಪರೇಡ್‌ ತರಬೇತಿಯಲ್ಲಿ ಭಾಗವಹಿಸಿ, ಶ್ರದ್ಧೆ ಹಾಗೂ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಪೊಲೀಸರಂತೆ ಗೃಹರಕ್ಷಕರು ಖಾಕಿ ಸಮವಸ್ತ್ರದೊಂದಿಗೆ ಕರ್ತವ್ಯ ನಿರ್ವಹಿಸುತ್ತಾರೆ. ಸಮವಸ್ತ್ರದಲ್ಲಿದ್ದಾಗ ಶಿಸ್ತು, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದರು.

ಈ ಸಂಧರ್ಭದಲ್ಲಿ ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ,ಅಬಕಾರಿ ವೃತ್ತ ನಿರೀಕ್ಷಕ ನಾಗರಾಜ್ , ಪಿಎಸ್‌ಐ ರಾಜುರೆಡ್ಡಿ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X