ಒನ್ ಟೈಮ್ ಸೆಟಲ್ ಮೆಂಟ್ | ಬ್ಯಾಂಕ್‌ಗಳು ರೈತರಿಗೆ ಸೂಕ್ತ ಸಲಹೆ ನೀಡಲಿ: ಹೆಚ್ ಡಿ ಕುಮಾರಸ್ವಾಮಿ ಸೂಚನೆ

Date:

Advertisements

ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃ ಸಾಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು.

ಮಂಡ್ಯದಲ್ಲಿ ನಡೆದ ಜಿಲ್ಲಾ ಬ್ಯಾಂಕರುಗಳ ಸಭೆಯಲ್ಲಿ ಆನ್‌ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು, “ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು” ಎಂದು ಹೇಳಿದರು.

“ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ” ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.

Advertisements

“ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಸಚಿವರು ಸಲಹೆ ನೀಡಿದರು.

ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್ ಗಳ ಮುಖ್ಯಸ್ಥರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯದಲ್ಲಿ ಚಿನ್ನಾಭರಣ ದರೋಡೆ: ಕೃತ್ಯ ನೋಡಿದ ವ್ಯಕ್ತಿಯನ್ನು ಕೊಲೆಗೈದು ಪರಾರಿಯಾದ ಕಳ್ಳರು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ...

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

Download Eedina App Android / iOS

X