ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಯಾತ್ರಾಕೇಂದ್ರವಾಗಿರುವ ಸವದತ್ತಿಯ ಶ್ರೀ ರೆಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಗುರುವಾರ ಪೂರ್ಣಗೊಂಡಿದ್ದು, ಒಟ್ಟು ₹1.04 ಕೋಟಿ ಮೊತ್ತದ ಕಾಣಿಕೆ ಸಂಗ್ರಹಗೊಂಡಿದೆ.
ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡುಗುಂಟಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಭಕ್ತರಿಂದ ಸಮರ್ಪಿತಗೊಂಡ ಈ ಮೊತ್ತದಲ್ಲಿ ₹98.23 ಲಕ್ಷ ನಗದು, ₹5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ಹಾಗೂ ₹1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿವೆ ಎಂದು ತಿಳಿಸಿದ್ದಾರೆ.
ಸಪ್ತಗುಡ್ಡ ಮತ್ತು ಸಪ್ತಕೊಳ್ಳಗಳ ಮಧ್ಯೆ ನೆಲೆಗೊಂಡಿರುವ ಯಲ್ಲಮ್ಮನ ಗುಡ್ಡಕ್ಕೆ ರಾಜ್ಯದ ವಿವಿಧ ಭಾಗಗಳಲ್ಲದೆ ದೇಶದ ವಿವಿಧ ಭಾಗಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ತಮ್ಮ ಇಚ್ಛಾರ್ಥಗಳು ಪೂರ್ಣವಾದ ಹಿನ್ನೆಲೆಯಲ್ಲಿ ಭಕ್ತರು ದೇವಿಗೆ ನಗದು, ಚಿನ್ನ, ಬೆಳ್ಳಿ ಸೇರಿದಂತೆ ಹಲವು ಆಭರಣಗಳನ್ನು ಭಕ್ತಿಯಿಂದ ಅರ್ಪಿಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಶೌಚಾಲಯದಲ್ಲೇ ಕುಳಿತು ಹೈಕೋರ್ಟ್ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್
ಹುಂಡಿಗಳ ಎಣಿಕೆ ಕಾರ್ಯವನ್ನು ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರ, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನ ಅಧಿಕಾರಿಗಳು, ಸವದತ್ತಿ ತಹಶೀಲ್ದಾರ, ಹಾಗೂ ಪೊಲೀಸ್ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆಸಲಾಯಿತು.