ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭದಲ್ಲಿ ನೂಕಾಟ ವಾಗ್ವಾದ; ಬಣ ರಾಜಕೀಯ ಜೋರು

Date:

Advertisements

ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ ಬಣ ರಾಜಕೀಯಕ್ಕೆ ಕಾರಣವಾಯಿತು.
ಅಂತಿಮ ಹಂತದಲ್ಲಿ ಎರಡು ಬಣಗಳ ವಾಗ್ಯುದ್ದ ಮತ್ತು ತಳ್ಳಾಟಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು. ನಿರ್ಗಮಿತ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ನೂತನ ಅಧ್ಯಕ್ಷರ ಬಣಗಳ ನಡುವೆ ಅಧಿಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಹಿಂದಿನ ಪದಾಧಿಕಾರಿಗಳು, ಅಧ್ಯಕ್ಷರಿಗೆ ಆಹ್ವಾನ ನೀಡದಕ್ಕೆ ನೂಕಾಟ, ವಾಗ್ಯುದ್ದ ನಡೆಯಿತು.

1002222461

ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ಇಂದು ಜರುಗಿತು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಬಣ ರಾಜಕೀಯ ಮತ್ತು ಪದಾಧಿಕಾರಿಗಳ ಮಧ್ಯದಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ಮತ್ತು ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಿಗೆ ಮುಂದಕ್ಕೆ ಸಾಗುವ ಬಗ್ಗೆ ತಿಳಿ ಹೇಳಿ ಸಲಹೆ ನೀಡಿದರೂ, ಅಂತಿಮವಾಗಿ ಮತ್ತೆ ಬಣ ರಾಜಕೀಯ ಮೇಳೈಸಿದೆ.

1002222443

ಇತ್ತೀಚಿಗೆ ತಾನೇ ಯುವ ಕಾಂಗ್ರೆಸ್ ಚುನಾವಣೆ ನಡೆದು ಯುವ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಬ್ಲಾಕ್ ಪದಾಧಿಕಾರಿಗಳ ಆಯ್ಕೆಯಾಗಿತ್ತು. ಅವರುಗಳ ಪ್ರದಗ್ರಹಣ ಸಮಾರಂಭ ಇಂದು ನಿಗದಿಯಾಗಿತ್ತು. ನಿಗದಿಯಂತೆ ನಡೆದ ಸಮಾರಂಭದಲ್ಲಿ ‘ಅಧ್ಯಕ್ಷರು ಮತ್ತು ಅವರ ಪದಗ್ರಹಣ ಸಮಾರಂಭಕ್ಕೆ ನಿರ್ಗಮಿತ ಅಧ್ಯಕ್ಷರಿಂದ ಅಧಿಕಾರ ಹಸ್ತಾಂತರವಾಗಬೇಕು. ಆದರೆ ಅವರನ್ನೇ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ’ ಎಂದು ತಕರಾರು ಕೇಳಿ ಬಂದಿತು.

Advertisements
1002222445

ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷರಿಗೆ ಮಾತನಾಡಲು ಅವಕಾಶ ನೀಡಬೇಕು. ನಮ್ಮ ಅಹವಾಲುಗಳನ್ನು ಕೇಳಿಸಿಕೊಳ್ಳಬೇಕು. ಇದಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯಮಟ್ಟದ ಕಾರ್ಯದರ್ಶಿಗಳು, ಪದಾಧಿಕಾರಿಗಳು ಭಿನ್ನಾಭಿಪ್ರಾಯವನ್ನು ಸರಿಪಡಿಸಬೇಕು ಎಂದು ಪದೇ ಪದೇ ಮನವಿ ಮಾಡಿ ಕಾರ್ಯಕ್ರಮದಲ್ಲಿ ತಕರಾರು ತೆಗೆದ ಪ್ರಸಂಗ ನಡೆಯಿತು.

1002222447

ಅಂತಿಮವಾಗಿ ಅಧ್ಯಕ್ಷರು ಮತ್ತು ರಾಜ್ಯ ಉಸ್ತುವಾರಿಗಳು ಕಾರ್ಯಕ್ರಮ ಮುಗಿದ ನಂತರ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಕ್ಕಾಗಿ ತಿಳಿಸಿದರು. ಆದರೆ ಅಂತಿಮವಾಗಿ ಪದಾಧಿಕಾರಿಗಳು ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರದ ವೇಳೆ ನಿರ್ಗಮನ ಅಧ್ಯಕ್ಷರಿಂದಲೇ ಅಧಿಕಾರ ಹಸ್ತಾಂತರ ನಡೆಯಬೇಕು ಎಂದು ಆಗ್ರಹಿಸಿ ವೇದಿಕೆ ಮುಂಭಾಗದಲ್ಲಿ ಜೋರು ದನಿಯಲ್ಲಿ ಆಗ್ರಹಿಸಿದ ಘಟನೆ ನಡೆಯಿತು.

ಈ ವೇಳೆ ರಾಜ್ಯದ ಪದಾಧಿಕಾರಿಗಳು ಸೇರಿದಂತೆ ಅಸಮಧಾನಿತರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಯಿತು. ಆದರೂ ಇದರ ನಡುವೆ ಅಧಿಕಾರ ಹಸ್ತಾಂತರ ನಡೆದು ಪರಸ್ಪರ ವಾಗ್ವಾದಕ್ಕೆ ಮತ್ತು ಕೂಗಾಟಕ್ಕೆ ಕಾರಣವಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ

ಅದೇ ಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮಂಜುನಾಥಗೌಡ, ಉಪಾಧ್ಯಕ್ಷೆ ದೀಪಿಕಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಪದಾಧಿಕಾರಿಗಳಾದ ಬಾಹುಬಲಿ ಜೈನ್ , ರಾಜ್ಯ ಉಸ್ತುವಾರಿ ನಿಗಮ್ ಬಂಡಾರಿ, ಜಿಲ್ಲಾಧ್ಯಕ್ಷ ವರುಣ್ ಬೆಣ್ಣಿಹಳ್ಳಿ, ನಿತಿನ್ ಕೊಂಡಜ್ಜಿ, ದೀಪಿಕ್ ಶೆಟ್ಟಿ, ಮೈನುದ್ದೀನ್, ತಾಹಿರ್ ಇತರರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X