ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ, ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದಿರುವ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ. ಪರಿಣಾಮ ಶಾಕ್‌ಸರ್ಕ್ಯೂಟ್ ಉಂಟಾಗಿ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ.
ತಾಲ್ಲೂಕಿನ ಹೊನ್ನಡ್ಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮುಂಚೆಯೇ, ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಕಿಡಿ ಹೊತ್ತುತ್ತಿದ್ದ ಬಗ್ಗೆ ಸ್ಥಳೀಯರು ಲೈನ್‌ಮ್ಯಾನ್ ಗಮನಕ್ಕೆ ತರಲಾಗಿತ್ತು. ಆದರೆ, ಎಚ್ಚೆತ್ತುಕೊಂಡು ಸಮಸ್ಯೆಯನ್ನು ಪರಿಹರಿಸದೆ ಲೈನ್‌ಮ್ಯಾನ್‌ಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದರು. ಆ ಕಾರಣದಿಂದಲೇ ಅನಾಹುತ ನಡೆದಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ವಿದ್ಯುತ್ ಶಾಕ್ ಸರ್ಕ್ಯೂಟ್ ಉಂಟಾದ ಪರಿಣಾಮ 15ಕ್ಕೂ ಹೆಚ್ಚು ಮನೆಗಳಲ್ಲಿದ್ದ ಟಿವಿ, ಫ್ಯಾನ್, ಬಲ್ಬ್ ಇತರೆ ಸಾಮಾಗ್ರಿಗಳು ಸುಟ್ಟುಹೋಗಿವೆ ಎಂದು ಗ್ರಾಮದ ಸುಖೀರ್ಥ, ಶಿಲ್ಪ ಸೇರಿದಂತೆ ಸ್ಥಳೀಯರು ಹೇಳಿದ್ದಾರೆ.