- ‘ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ’
- ಈ ಬಗ್ಗೆ ಗೃಹ ಸಚಿವರ ಸ್ಪಷ್ಟೀಕರಣ ನೀಡಬೇಕು: ಆಗ್ರಹ
ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಚಿತ್ರಗಳನ್ನು ತೆಗೆಯುವುದು ಹೇಯ ಕೃತ್ಯ ಮತ್ತು ಖಂಡನೀಯ. ಈ ಬಗ್ಗೆ ಟ್ವೀಟ್ ಮಾಡಿರುವ ವಿದ್ಯಾರ್ಥಿನಿಯ ವಿರುದ್ಧವೇ ತನಿಖೆ ಮಾಡುವ ರೀತಿ ಪೊಲೀಸರು ನಡೆದುಕೊಳ್ಳುತ್ತಿದ್ದು, ಅವರು ಯಾರ ಅಣತಿಯಂತೆ ನಡೆಯುತ್ತಿದ್ದಾರೆ? ಪೊಲೀಸರು ಅಧಿಕಾರಸ್ಥರ ಒತ್ತಡಕ್ಕೆ ಮಣಿಯುತ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮೊಬೈಲ್ ವಿಡಿಯೊಗಳನ್ನು ಸೀಜ್ ಮಾಡಬೇಕು. ಅದೇನು ದೊಡ್ಡ ಪ್ರಕರಣ ಅಲ್ಲ ಅಂತ ಗೃಹ ಸಚಿವರು ಈಗಲೇ ಹೇಳುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ. ಸುಮ್ಮನೇ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಯಿತಾ? ಸುಮ್ಮನೇ ವಿದ್ಯಾರ್ಥಿಗಳು ತಪ್ಪೊಪ್ಪಿಗೆ ನೀಡಿದ್ದಾರಾ? ಏನೂ ಇಲ್ಲದೆ ಕಾಲೇಜಿನವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರಾ? ಅವರ ಮೇಲೆ ಪ್ರಕರಣ ದಾಖಲಿಸಲು ತಪ್ಪೊಪ್ಪಿಗೆ ಒಂದೇ ಸಾಕು”ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ
“ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಹೇಳುವುದಾದರೆ, ಪೊಲೀಸರಿಂದ ರಕ್ಷಣೆ ಸಿಗುವುದಿಲ್ಲ ಎನ್ನುವ ಭಾವನೆ ಮೂಡಲಿದೆ. ಹಿರಿಯ ಅಧಿಕಾರಿಗಳು ಕಾನೂನು ಪ್ರಕಾರ ನಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಕೆಳಗಿನ ಅಧಿಕಾರಿಗಳು ಒತ್ತಡಕ್ಕೆ ಮಣಿದು ಕೆಲಸ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು. ತಗ್ಗಿ ಬಗ್ಗಿ ನಡೆದರೆ, ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಡಿಮೆಯಾಗಲಿದೆ” ಎಂದರು.
“ಗೃಹ ಸಚಿವರು ಇದು ಫೆಕ್ ನ್ಯೂಸ್ ಅಂತ ಹೇಳಿದ್ದಾರೆ. ಹಾಗಾದರೆ, ಕಾಲೇಜು ವಿದ್ಯಾರ್ಥಿಗಳು ತಪ್ಪೊಪ್ಪಿಗೆ ಯಾಕೆ ಕೊಟ್ಟಿದ್ದಾರೆ. ಅವರನ್ನು ಯಾಕೆ ಅಮಾನತು ಮಾಡಿದರು? ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡಬೇಕು” ಎಂದು ಆಗ್ರಹಿಸಿದರು.