ಗದಗ | ಶಾಂತಿಯುತ ಹೋರಾಟವನ್ನು ಹತ್ತಿಕ್ಕಿ, ಹೋರಾಟಗಾರರನ್ನು ಬಂದಿಸಿದ್ದು ಖಂಡನಿಯ: ಬಾಲು ರಾಠೋಡ

Date:

Advertisements

“ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ನಾವು ನಮ್ಮ ಸಂಘಟನೆಗಳಿಂದ ಖಂಡಿಸುತ್ತೇವೆ” ಎಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಅಧ್ಯಕ್ಷ ಬಾಲು ರಾಠೋಡ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೋಲಿಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ  ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು 1177 ಎಕರೆ ಭೂಮಿ ಉಳಿಸಿಕೊಳ್ಳಲು 1181 ದಿನಗಳಿಂದ ಪ್ರಜಾತಾಂತ್ರಿಕ ಹೋರಾಟ ಮಾಡುತ್ತಿದ್ದರು. ಸರಕಾರ ಅವರ ಇಷ್ಟು ದಿನಗಳ ಹೋರಾಟದ ಒತ್ತಾಯಕ್ಕೆ ಕಿವಿಕೊಡದೇ ಭೂ ಸ್ವಾಧೀನ ಪ್ರಕ್ರಿಯೆಯ ಅಂತಿಮ ಘಟ್ಟಕ್ಕೆ ಕೈ ಹಾಕಿದ್ದಾರೆ. ಹಿನ್ನೆಲೆಯಲ್ಲಿ ಈ ಹೋರಾಟ ಬೆಂಬಲಿಸಿ ರಾಜ್ಯದ ಮೂಲೆ ಮೂಲೆಗಳಿಂದ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹೋರಾಟಗಾರ ಮೇಲೆ ಹಲ್ಲೆ ಮಾಡಿ ಬಂಧಿಸಿರುವುದು ಖಂಡನೀಯ” ಎಂದರು.

Advertisements

ಬೀದಿ ಬದಿ ವ್ಯಾಪಾರಸ್ಥರು ಸಂಘದ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, “ಶಾಂತಿಯುತ ಪ್ರತಿಭಟನೆ‌ ನಡೆದೆ ಸ್ಥಳದಲ್ಲಿ ಪೋಲಿಸರನ್ನು ಬಿಟ್ಟು ಸರ್ಕಾರ ಅನ್ನದಾತರ ಬದುಕಿಗೆ ಕೊಳ್ಳಿ ಇಟ್ಟು ಕಾರ್ಪೊರೇಟ್ ‌ಬಂಡವಾಳಿಗರಿಗೆ ಮೃಷ್ಟಾನ್ನ ತಿನ್ನಿಸುವ ಯೋಜನೆಯ  ಈ ಸಂಚು ಜನ ವಿರೋಧಿ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದರು.

ಡಿವಾಯ್ಎಫ್ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ಮಾತನಾಡಿ, “ಸರ್ಕಾರ ತನ್ನ ಭೂ ಸ್ವಾಧೀನ ನೀತಿ ಕೈ ಬಿಡುಬೇಕು ಇಡೀ ರಾಜ್ಯಾದ್ಯಂತ ಈ ಪ್ರತಿಭಟನೆ ತೀವ್ರವಾಗಿ ನಡೆಯಲಿದೆ.  ಪ್ರಜಾಸತ್ತಾತ್ಮಕ ಹೋರಾಟವನ್ನು ಪ್ರತಿಬಂಧಿಸಿ ಹೋರಾಟಗಾರರನ್ನು ಅಮಾನವೀಯವಾಗಿ ಹಿಂಸಿಸಿ ಬಂಧಿಸಿದ ನಡೆಯನ್ನು ನಾವು ಖಂಡಿಸುತ್ತೇವೆ. ಪೋಲಿಸ್ ದೌರ್ಜನ್ಯ ಖಂಡಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ| ಗುತ್ತಿಗೆದಾರನ ಕೊಲೆ ಪ್ರಕರಣ ಆರೋಪಿಗಳ ಕಾಲಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಮುಖಂಡ ಮೆಹಬೂಬ್ ಹವಾಲ್ದಾರ್, ರೂಪ್ಲೇಶ ಮಾಳೊತ್ತರ, ನೀಲಮ್ಮ ಹಿರೇಮಠ, ಸೇರಿದಂತೆ ಕಟ್ಟಡ ಕಾರ್ಮಿಕ ಸಂಘಟನೆ, ಬೀದಿ ಬದಿ ವ್ಯಾಪಾರಸ್ಥರ ಸಂಘ, ಅಂಗನವಾಡಿ ನೌಕರರ ಸಂಘ, ಕೃಷಿಕೂಲಿಕಾರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಹಕ್ಕೊತ್ತಾಯಗಳು 1) ಫಲವತ್ತಾದ ಭೂಮಿಯಲ್ಲಿ ತಮ್ಮ ಬದುಕು ಕಂಡುಕೊಂಡ ಯಾವುದೇ ರೈತರ ತಂಟೆಗೆ ಬರಬೇಡಿ. ರೈತರ ಭೂಮಿ ರೈತರದ್ದೇ ಆಗಿ ಉಳಿಸಬೇಕು, ಬೇಷರತ್ತಾಗಿ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು. ರೈತರ ಭೂಮಿಯನ್ನು ಸರ್ಕಾರದ ಯಾವುದೇ ಯೋಜನೆಗೆ ನೀಡಬಾರದು, ಕೂಡಲೇ ಕ್ಯಾಬಿನೆಟ್ ನಿರ್ಣಯ ಮಾಡಬೇಕು. 2) ಬಂಧಿತ ಹೋರಾಟಗಾರರನ್ನು ಯಾವುದೇ ಪ್ರಕರಣಗಳನ್ನು ಹಾಕದೇ ಬೇಷರತ್ ಬಿಡುಗಡೆ ಮಾಡಬೇಕು. ವೈಯಕ್ತಿಕವಾಗಿ ಸಂಘಟನಾತ್ಮಕವಾಗಿ ಆಗಿರುವ ಅನಾಹುತ ಸರಕಾರವೇ ತುಂಬಿಕೊಡಬೇಕು. 3) ಅಮಾನವೀಯ ದೌರ್ಜನ್ಯ ಎಸಗಿದ ಪೋಲಿಸರ ಮೇಲೆ ಕ್ರಮಕೈಗೊಳ್ಳಬೇಕು, ತನಿಖೆ ನಡೆಸಬೇಕು. ಇನ್ನೆಂದೂ ಹೋರಾಟವನ್ನು ಮುರಿಯುವ ಅಸಾಂವಿಧಾನಿಕ ಕೆಲಸ ಮಾಡಬಾರದು ಎಂದು ಆಗ್ರಹಿಸುತ್ತೇವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X