ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ದಕ್ಷಿಣ ಕನ್ನಡವನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು: ಜಿಪಂ ಸಿಇಒ ಸೂಚನೆ
ತಾಲೂಕು ವ್ಯಾಪ್ತಿಯಲ್ಲಿ ಕಡಲ್ಕೊರೆತ ಉಂಟಾಗಿರುವ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.