ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ್ ಗ್ರಾಮದಲ್ಲಿ ಸೆಂಟ್ರಲ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ 26 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶ ಮೂಲದ ರವಿಕುಮಾರ್ ಎಂದು ಗುರುತಿಸಲಾದ ಯುವಕ, ಉಗಾರ ಶಾಖೆಯಲ್ಲಿ ತರಬೇತಿ ಪಡೆಯಲು ಕೇವಲ ಮೂರು ದಿನಗಳ ಹಿಂದೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದ. ಸ್ಥಳೀಯ ನ್ಯಾಯವಾದಿಯೊಬ್ಬರ ಮನೆಯಲ್ಲೇ ಬಾಡಿಗೆಗೆ ಇರುತ್ತಿದ್ದ ಅವರು, ಆ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡ ದೇವಸ್ಥಾನ ಹುಂಡಿಯಲ್ಲಿ ₹1.4 ಕೋಟಿ ಕಾಣಿಕೆ ಸಂಗ್ರಹ
ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಗವಾಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಬಂಧಪಟ್ಟ ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.