ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ‘ದಲಿತ ಸಾಹಿತ್ಯ ಅರ್ಧಶತಮಾನ’ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿ ಆಹ್ವಾನಿಸಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ದಕ್ಷಿಣ ಕನ್ನಡವನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು: ಜಿಪಂ ಸಿಇಒ ಸೂಚನೆ
ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‍ಸೈಟ್ https://sahithyaacademy.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.