ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಲಬುರಗಿ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರ ಇಂಗ್ಲಿಷ್ ಭಾಷಾ ಶಿಕ್ಷಕ ಬಸವರಾಜ ದ್ಯಾಮಾ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಮದಾನೆ ಆದೇಶಿಸಿದ್ದಾರೆ.
ಶಿಕ್ಷಕ ಬಸವರಾಜ ದ್ಯಾಮಾ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಹಾಗೂ ಹಳೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ತನಿಖೆಗೆ ಬಿಇಒ ಶಿವಗುಂಡಪ್ಪ ಸಿದ್ಧಣಗೋಳ ನೇತೃತ್ವದಲ್ಲಿ ಸದಸ್ಯರ ಸಮಿತಿ ರಚಿಸಲಾಗಿತ್ತು.
ಇದನ್ನೂ ಓದಿ : ಕಲಬುರಗಿ | ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ