- ನವದೆಹಲಿಯಲ್ಲಿ ಭೇಟಿ ರಾಜ್ಯ ರಸ್ತೆ ಯೋಜನೆಗಳ ಕುರಿತು ಚರ್ಚೆ
- ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸಲು ಗಡ್ಕರಿ ಸೂಚನೆ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ರಾಜ್ಯದ ರಸ್ತೆ ಯೋಜನೆಗಳ ಕುರಿತು ಮಾತುಕತೆ ನಡೆಸಿದ್ದಾರೆ.
ನವದೆಹಲಿಯಲ್ಲಿ ಬುಧವಾರ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಸ್ಪಂದಿಸಿದ್ದು,”ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ” ಎಂದು ಲೋಕೋಪಯೋಗಿ ಸಚಿವರು ತಿಳಿಸಿದ್ದಾರೆ.
“ಶಿರಾಡಿ ಘಾಟ್ ಸುರಂಗ ನಿರ್ಮಾಣ, ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋ ಚರ್ಚಿಸಲಾಗಿದೆ” ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.