ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಭಾರತೀಯ ಮಹಿಳೆ; ಕರೆತರುವಂತೆ ತಾಯಿ ಮನವಿ

Date:

Advertisements

ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ ಮಹಿಳೆಯೊಬ್ಬರು ಚಿಕಾಗೋದ ರಸ್ತೆಗಳಲ್ಲಿ ಊಟಕ್ಕಾಗಿ ಪರದಾಡುತ್ತಿದ್ದಾರೆ. ತನ್ನ ಮಗಳ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು ಬರುವಂತೆ ಆಕೆಯ ತಾಯಿ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ.

35 ವರ್ಷದ ಸೈಯದಾ ಲುಲು ಮಿನ್ಹಾಜ್ ಜೈದಿ ಅವರ ತಾಯಿ ಹೈದರಾಬಾದ್‌ ನಗರದ ಸೈಯದಾ ವಹಾಜ್ ಫಾತಿಮಾ ಅವರು ವಿದೇಶಾಂಗ ಸಚಿವರಿಗೆ ಬರೆದಿರುವ ಪತ್ರದಲ್ಲಿ, “ನನ್ನ ಮಗಳು ಡೆಟ್ರಾಯಿಟ್‌ನ ಟ್ರೈನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು 2022 ಆಗಸ್ಟ್‌ನಲ್ಲಿ ಅಮೆರಿಕಕ್ಕೆ ಹೋಗಿದ್ದಳು. ಆಕೆಯ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಕಳೆದ ಎರಡು ತಿಂಗಳನಿಂದ ಅವಳು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ನನ್ನ ಮಗಳು ಊಟಕ್ಕೆ ಹಣವಿಲ್ಲದೆ ಹಸಿವಿನಿಂದ ಬಳಲುತ್ತಿದ್ದಾಳೆ. ಆಕೆ ಖಿನ್ನತೆಗೆ ಒಳಗಾಗಿದ್ದು, ಚಿಕಾಗೋದ ರಸ್ತೆಗಳಲ್ಲಿ ತಿರುಗಾಡುತ್ತಿದ್ದಾಳೆ. ತಾವು ಮಧ್ಯ ಪ್ರವೇಶಿಸಿ ಮರಳಿ ಭಾರತಕ್ಕೆ ಕರೆದುಕೊಂಡು ಬನ್ನಿ” ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಸೈಯದಾ ಲುಲು ಮಿನ್ಹಾಜ್ ಜೈದಿಯನ್ನು ಅಮೆರಿಕದಲ್ಲಿರುವ ಇಬ್ಬರು ಹೈದರಾಬಾದಿ ಯುವಕರು ಗುರುತಿಸಿ ಈಗ ಇರುವ ಸ್ಥಿತಿಯ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿಸಿದ್ದಾರೆ.

Advertisements

‘ಮಗಳು ಚಿಕಾಗೋದ ರಸ್ತೆಗಳಲ್ಲಿ ಒಂಟಿಯಾಗಿರುವ ಭಾವಚಿತ್ರವನ್ನು ನಮಗೆ ಯುವಕರು ಕಳುಹಿಸಿದ್ದಾರೆ, ಆಕೆಯ ಸ್ಥಿತಿಯನ್ನು ನೋಡಲು ಸಾಧ್ಯವಾಗುತ್ತಿಲ್ಲ​. ದಯವಿಟ್ಟು ಭಾರತದ ರಾಯಭಾರ ಕಚೇರಿಗೆ ಈ ಬಗ್ಗೆ ತಿಳಿಸಿ, ವಾಷಿಂಗ್ಟನ್ ಡಿಸಿ, ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ತಕ್ಷಣವೇ ಅವಳನ್ನು ಸಂಪರ್ಕ ಮಾಡುವಂತೆ ಹೇಳಿ. ನನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರುವಂತೆ ಮಾಡಿ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ಲೋಕಸಭೆ ಸ್ಪೀಕರ್

ಈ ಪತ್ರವನ್ನು ಬಿಆರ್‌ಎಸ್ ನಾಯಕ ಖಲೀಕುರ್ ರಹಮಾನ್ ಟ್ವಿಟರ್‌ನಲ್ಲಿ ಹಂಚಿಕೊಂಡ ನಂತರ ಮಾಧ್ಯಮಗಳಲ್ಲಿ ಸುದ್ದಿ ಬೆಳಕಿಗೆ ಬಂದಿದೆ. ತನ್ನ ಮಗಳನ್ನು ಮನೆಗೆ ಕರೆತರಲು ಸಹಾಯ ಮಾಡುವಂತೆ ಆಕೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಚಿಕಾಗೋದಲ್ಲಿರುವ ದೂತವಾಸವನ್ನು ಕೋರಿದ್ದಾರೆ ಎಂದು ಖಲೀಕುರ್ ರಹಮಾನ್ ಹೇಳಿದ್ದಾರೆ.

ಮಹಿಳೆಯ ತಾಯಿ ಬರೆದಿರುವ ಪತ್ರ ಮತ್ತು ಆಕೆಯ ಸ್ಥಿತಿಯ ಭಾವಚಿತ್ರವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಸಚಿವ ಎಸ್​​ ಜೈಶಂಕರ್​ ಅವರಿಗೆ ಬಿಆರ್‌ಎಸ್ ನಾಯಕ ಟ್ಯಾಗ್​​ ಕೂಡ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X