ಮಂಗಳೂರು | ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದು ಹೆಣವಾದ ಅಕ್ಕ

Date:

Advertisements

ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಊರಿಗೆ ಬಂದಿದ್ದ ಅಕ್ಕ ಮಂಗಳೂರು ನಗರದ ಹೊರವಲಯದ ಪಾವಂಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲೇ ಅಸುನೀಗಿದ ಘಟನೆ ನಡೆದಿದೆ.

ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು. ಶ್ರುತಿ ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿ ತಮಿಳುನಾಡಿನ ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್ ಜೂ.10ರಂದು ಸಾವನ್ನಪ್ಪಿದ ಹಿನ್ನೆಲೆ ಅವರು ಅಂತ್ಯಸಂಸ್ಕಾರಕ್ಕೆಂದು ಮನೆಗೆ ಆಗಮಿಸಿದ್ದರು.

ಇದನ್ನೂ ಓದಿ: ಉಳ್ಳಾಲ | ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

Advertisements

ಈ ಮಧ್ಯೆ ಬ್ಯಾಂಕ್ ಕೆಲಸಕ್ಕೆಂದು ತಂದೆಯ ಜತೆ ಸ್ಕೂಟರ್​ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಮತ್ತೆ ಮನೆಯತ್ತ ಹಿಂತಿರುಗುವಾಗ ಈ ಅವಘಡ ನಡೆದಿದೆ. ಮಳೆ ಬಂದ ಹಿನ್ನೆಲೆ ಪಾವಂಜೆ ಬಳಿ‌ ಸ್ಕೂಟರ್ ನಿಲ್ಲಿಸಿ, ರೈನ್ ಕೋಟ್ ಹಾಕುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಅಪಘಾತ ಜರುಗಿದೆ. ಸ್ಕೂಟರ್​ ಹಾಗೂ ಅಲ್ಲೇ ನಿಂತಿದ್ದ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರು, ಶ್ರುತಿಯವರ ಸಹಿತ ಎಳೆದೊಯ್ದು ಹೆದ್ದಾರಿ ಬದಿಯಿದ್ದ ಸಿಮೆಂಟ್ ಸ್ಲ್ಯಾಬ್‌ಗೆ ಅಪ್ಪಳಿಸಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

ಪರಿಣಾಮ ಗಂಭೀರವಾಗಿ ಗಾಯಗೊಂಡ ಶ್ರುತಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ತಂದೆ ಗೋಪಾಲ ಆಚಾರ್ಯ (57) ಕೂಡ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಘಟನೆಯಲ್ಲಿ ಮತ್ತೋರ್ವ ಮಹಿಳೆಗೂ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗೋಪಾಲ ಆಚಾರ್ಯರಿಗೆ ಇಬ್ಬರೇ ಮಕ್ಕಳಾಗಿದ್ದು, ಪುತ್ರ 15 ದಿನಗಳ ಹಿಂದಷ್ಟೇ ಮೃತಪಟ್ಟಿದ್ದ. ಆ ನೋವು ಮಾಸುವ ಮುನ್ನವೇ ಪುತ್ರಿಯೂ ಅಪಘಾತದಿಂದ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X