ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ, ಅಂಥವರೇ ಸಿಎಂ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ನಲ್ಲಿ `ಸೆಪ್ಟೆಂಬರ್ ಕ್ರಾಂತಿ’ ಹಾಗೂ ಸಿಎಂ ಬದಲಾವಣೆ ವದಂತಿ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದಾಗಿನಿಂದಲೂ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಇದನ್ನು ಹೇಳುತ್ತಲೇ ಇದ್ದಾರೆ. ಕೆಲವು ಗುಂಪಿನವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ. ಅದಕ್ಕೆ ಈ ರೀತಿ ಊಹಾಪೋಹಗಳನ್ನು ಹರಡುತ್ತಿದ್ದಾರೆ. ಸರ್ಕಾರ ಬಂದಾಗಿನಿಂದಲೂ ಕೂಡ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಬೆಂಬಲ ಇದೆ ಎಂದರು.
ಶಾಸಕರು ಕೂಡ ಬೆಂಬಲ ಕೊಟ್ಟಿದ್ದಾರೆ, ಆ ಗುಂಪು ಯಾವುದು ಎಂದು ನನಗೆ ಗೊತ್ತಿಲ್ಲ. ರಾಜಣ್ಣ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಹೈಕಮಾಂಡ್ ಕೂಡ ಬದಲಾವಣೆ ಮಾಡುತ್ತೆ ಅಂತ ಹೇಳಿಲ್ಲ. ಆ ರೀತಿಯಾದ ಸೂಚನೆಯನ್ನು ಹೈಕಮಾಂಡ್ ಕೂಡ ಕೊಟ್ಟಿಲ್ಲ. ಹೀಗಾಗಿ ಸಿದ್ದರಾಮಯ್ಯನವರು ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಳ ಹುದ್ದೆಗೆ ಅರ್ಹತೆ ಇರುವವರು ಇದ್ದಾರೆ. ಕೆಲ ಶಾಸಕರು ಹೇಳಿರುವುದು ಸರ್ಕಾರದ ವಿರುದ್ಧವಾಗಿ ಪಕ್ಷದ ವಿರುದ್ಧವಾಗಿ ಅಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಇಲ್ಲ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ನಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?
ವಿಪಕ್ಷ ನಾಯಕ ಆರ್ ಅಶೋಕ್ ಕೊಟ್ಟ ಮಾಹಿತಿಗೆ ಮಹತ್ವ ಕೊಡಬೇಕಿಲ್ಲ. ಅವರು ಸರ್ಕಾರ ಬಂದಾಗಿನಿಂದಲೂ, ಮುಡಾ ಪ್ರಕರಣದ ವೇಳೆಯೂ ಸಿಎಂ ಬದಲಾಗುತ್ತಾರೆ ಎಂದು ಹೇಳಿದ್ದರು. ವಿಪಕ್ಷಗಳ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. ಡಿಕೆಶಿ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು. ಮೊದಲೇ ಹೇಳಿದಂತೆ ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.