ಕಲಬುರಗಿ | ದಲಿತ ವಿದ್ಯಾರ್ಥಿಗಳ ಕ್ಷೌರ ಮಾಡಲು ನಿರಾಕರಣೆ; ಪ್ರಕರಣ ದಾಖಲು

Date:

Advertisements

ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ದಲಿತ ಸಮುದಾಯದ ಶಾಲಾ ಮಕ್ಕಳಿಗೆ ಕ್ಷೌರ ಮಾಡಲು ನಿರಾಕರಿಸಿದ ಅಮಾನವೀಯ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.

ಜೂ.27ರಂದು ಕಿಣ್ಣಿ ಸುಲ್ತಾನ್ ಗ್ರಾಮದ ಶಾಲಾ ಮಕ್ಕಳು ಕ್ಷೌರ ಮಾಡಿಸಲು ಗ್ರಾಮದ ಕ್ಷೌರ ಅಂಗಡಿಗೆ ಹೋಗಿದ್ದಾರೆ. ಈ ವೇಳೆ ಕ್ಷೌರಿಕ ‘ದಲಿತ ಮಕ್ಕಳಿಗೆ ಕ್ಷೌರ ಮಾಡುವುದಿಲ್ಲ. ನೀವು ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ’ ಎಂದು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಕ್ಷೌರಿಕನೊಂದಿಗೆ ದಲಿತ ಮುಖಂಡರೊಬ್ಬರು ಮಾತನಾಡಿ, ಶಿಕ್ಷಕರು ಕ್ಷೌರ ಮಾಡಿಕೊಂಡು ಬರಬೇಕು ಎಂದು ಹೇಳಿದ್ದಾರೆ, ಹಾಗಾಗಿ ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಮಕ್ಕಳಿಗೆ ಯಾಕೆ ಕ್ಷೌರ ಮಾಡಿಲ್ಲ’ ಎಂದು ಪ್ರಶ್ನಿಸಿದಾಗ, ‘ನಮ್ಮ ಹಿರಿಯರು ಹೊಲೆಯ ಮಾದಿಗರಿಗೆ ಕ್ಷೌರ ಮಾಡಿಲ್ಲ, ನಾವು ಕೂಡ ನಿಮಗೆ ಕ್ಷೌರ ಮಾಡುವುದಿಲ್ಲ’ ಎಂದು ಕ್ಷೌರಿಕ ಹೇಳಿದ್ದಾನೆ ಎಂದು ದೂರಿದರು.

Advertisements

ಗ್ರಾಮದಲ್ಲಿ ಅನೇಕ ವರ್ಷಗಳಿಂದ ಕ್ಷೌರ ಮಾಡಲು ಹಿಂದೇಟು ಹಾಕಿದ್ದಾರೆ. ಹಾಗಾಗಿ ಸಮುದಾಯದ ಜನರು 10 ಕಿಮೀ ದೂರದ ಆಳಂದ ಪಟ್ಟಣ, ಸಮೀಪದ ತಡಕಲ್ ಗ್ರಾಮಗಳಿಗೆ ತೆರಳಿ ಕ್ಷೌರ ಮಾಡಿಕೊಂಡು ಬರುತ್ತಿದ್ದೇವೆ. ಗ್ರಾಮದಲ್ಲಿ ಮೇಲ್ಜಾತಿಯವರ ಪ್ರಭಾವದಿಂದ ನಮಗೆ ಕ್ಷೌರ ಮಾಡಲು ನಿರಾಕರಣೆ ಮಾಡುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ತಾಲೂಕು ಮತ್ತು ಜಿಲ್ಲೆಯ ಅಧಿಕಾರಿಗಳು ನಮ್ಮ ಗ್ರಾಮದ ಅಸ್ಪೃಶ್ಯತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥ ಮಲ್ಲಿಕಾರ್ಜುನ್ ಶೃಂಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ 125 ದಲಿತ ಸಮುದಾಯದ ಮನೆಗಳಿದ್ದು, ಅನೇಕ ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ, ಈವರೆಗೆ ಜಾತಿ ನೋಡಿಕೊಂಡು ನಮ್ಮ ಮಕ್ಕಳಿಗೆ ಗ್ರಾಮದಲ್ಲಿರುವ 3 ಸಲೂನ್‌ನವರೂ ಕಟಿಂಗ್ ಮಾಡಲು ನಿರಾಕರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಘಟನಾ ಸ್ಥಳಕ್ಕೆ ಶುಕ್ರವಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ದಲಿತ ಸಮುದಾಯದವರಿಗೆ ಕಟಿಂಗ್ ಮಾಡಲು ತಿಳಿಸಿದ್ದರು. ಅವರ ಸೂಚನೆಯನ್ನೂ ಧಿಕ್ಕರಿಸಿದ ಕ್ಷೌರಿಕ ಕ್ಷೌರ ಮಾಡಲು ನಿರಾಕರಿಸಿದ್ದ. ಈ ರೀತಿ ವರ್ತಿಸಿದರೆ ಪ್ರಕರಣ ದಾಖಲಿಸಬೇಕಾಗುತ್ತೆ ಎಂದು ಪೊಲೀಸರು ಹೇಳಿದ ಮೇಲೆ ಕ್ಷೌರಿಕ ಕ್ಷೌರ ಮಾಡಲು ಒಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ಹೋಳ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X