ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ವಿಜಯಪುರ ಜಿಲ್ಲೆ ಶೇ.100ರಷ್ಟು ರಾಷ್ಟ್ರ ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಪ್ರಶಂಸನಾ ಪತ್ರ ಲಭಿಸಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಸಂಶನ ಪತ್ರ ನೀಡುವಂತೆ ಸೂಚಿಸಲಾಗಿತ್ತು.
“ಜಿಲ್ಲೆಯು ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು, ಇಲಾಖೆಯ ಎಲ್ಲ ಸಿಬ್ಬಂದಿಗಳ ಅಚಲವಾದ ಬದ್ಧತೆ, ನಿರಂತರ ಶ್ರಮ, ಸಮನ್ವಯದ ಕಾರ್ಯ, ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ವಿಗೆ ನಾಂದಿಯಾಗಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಸಂಸನಾ ಪತ್ರದಲ್ಲಿ ತಿಳಿಸಿದ್ದಾರೆ.
“ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಇಂತಹ ಉತ್ಸಾಹದಿಂದ ಕಾರ್ಯನಿರ್ವಹಣೆಯನ್ನು ನಿರೀಕ್ಷಿಸಲಾಗುತ್ತದೆ. ಪ್ರಗತಿ ಪಥದಲ್ಲಿ ಜಿಲ್ಲೆಯ ಸಾಧನೆ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ” ಜಿಲ್ಲಾಧಿಕಾರಿ ಟಿ. ಭೂಬಾಲನ್ ಎಂದು ಹೇಳಿದ್ದಾರೆ.
ಈ ವಿಶೇಷ ಸಾಧನೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಕೃಷ್ಣ, ಭೀಮಾ ಮತ್ತು ದೋಣಿ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಜಿಲ್ಲೆಯ ನದಿ ಪಾತ್ರಗಳಲ್ಲಿನ ಗ್ರಾಮದ ಜನರು ಅಗತ್ಯ ಪ್ರವಾಹ ಪರಿಸ್ಥಿತಿ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇದನ್ನೂ ಓದಿದ್ದೀರಾ? ದಾವಣಗೆರೆ | ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆಯಂತಹ ಸಮಸ್ಯೆಗೆ ವಚನ ಸಾಹಿತ್ಯ ಪರಿಹಾರ
ನದಿ ಪಾತ್ರದಲ್ಲಿ ಸಾರ್ವಜನಿಕರು, ಮಹಿಳೆಯರು, ಮಕ್ಕಳು ಬಟ್ಟೆ, ಪಾತ್ರೆಗಳನ್ನು ತೊಳೆಯಲು, ಅನಾವಶ್ಯಕವಾಗಿ ನದಿ ಪಾತ್ರಕ್ಕೆ ತೆರಳುವುದು, ನದಿಯಲ್ಲಿ ಈಜುವುದು, ಮೀನು ಹಿಡಿಯುವುದನ್ನು ಮಾಡಬಾರದು” ಎಂದು ಹೇಳಿದ್ದಾರೆ.
“ಪ್ರವಾಹ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುವ ಮಾಹಿತಿಗಳ ಬಗ್ಗೆ ಸಾರ್ವಜನಿಕರು ನಿಗಾವಹಿಸಬೇಕು. ರೈತರು ನದಿಗಳಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಬೇಕು. ರೈತರು ರಾತ್ರಿ ಸಮಯದಲ್ಲಿ ತಮ್ಮ ಜಮೀನಿನ ಬೆಳೆಗಳಿಗೆ ನೀರು ಹರಿಸಲು ಹೋಗುವಾಗ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಜಿಲ್ಲಾ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಬಹುದಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.