ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ಮಹಿಳೆ ಮತ್ತು ಪುರುಷನನ್ನು ಬೆತ್ತಲೆಗೊಳಿಸಿ, ತಲೆ ಬೋಳಿಸಿ ಗ್ರಾಮಸ್ಥರು ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಹನುಮಕೊಂಡದ ಧರ್ಮಸಾಗರ ಮಂಡಲದ ತಟಿಕಾಯ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಿವಾಸಿಗಳೇ ಆದ ರಾಜು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿಹಾಕಿ, ಇಬ್ಬರಿಗೂ ಥಳಿಸಿ ದೌರ್ಜನ್ಯ ಎಸಗಿದ್ದಾರೆ.
ಗ್ರಾಮಸ್ಥರು ರಾಜು ಮತ್ತು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಥಳಿಸಿದ್ದಾರೆ. ಇಬ್ಬರ ತಲೆಯನ್ನೂ ಬೋಳಿಸಿದ್ದಾರೆ. ಇಬ್ಬರನ್ನೂ ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತವಾಗಿ ದೌರ್ಜನ್ಯ ಎಸಗಿದ್ದಾರೆ.
ಈ ಘಟನೆ ಬಳಿಕ ರಾಜು ಮತ್ತು ಮಹಿಳೆ ನಾಪತ್ತೆಯಾಗಿದ್ದಾರೆ. ಘಟನೆ ಕುರಿತು ಧರ್ಮಸಾಗರ್ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕಣ ದಾಖಲಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ. ಮಹಿಳೆಗೆ ಕಿರುಕುಳ ನೀಡಿದ್ದ ಆಕೆಯ ಕುಟುಂಬಸ್ಥರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಣಿಯಾಗಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.