ಬೈಕ್‌ ಟ್ಯಾಕ್ಸಿ ಚಾಲಕರಿಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ನಿರಾಕರಣೆ; ಆಕ್ರೋಶ

Date:

Advertisements

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಬೈಕ್ ಟ್ಯಾಕ್ಸಿ ವೆಲ್​ಫೇರ್​ ಅಸೋಸಿಯೇಷನ್ ಸದಸ್ಯರಿಗೆ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದಾರೆ.

ಹೈಕೋರ್ಟ್‌ನಿಂದ ಬೈಕ್‌ ಟ್ಯಾಕ್ಸಿ ನಿಷೇಧಿಸಿದ ನಂತರ ಬೈಕ್‌ ಟ್ಯಾಕ್ಸಿ ಸಂಘಟನೆಗಳಲ್ಲಿ ಒಂದಾದ ಬೈಕ್ ಟ್ಯಾಕ್ಸಿ ವೆಲ್​ಫೇರ್​ ಅಸೋಸಿಯೇಷನ್ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಮ್ಮ ಅಹವಾಲನ್ನು ತಿಳಿಸಿಸಲು ಉದ್ದೇಶಿಸಿತ್ತು. ಹಲವು ಬಾರಿ ಪ್ರತಿಭಟನೆ ನಡೆಸಲು ಸಂಘಟನೆಯ ಸದಸ್ಯರು ಪೊಲೀಸರಿಗೆ ಮನವಿ ಮಾಡಿದರೂ ಪೊಲೀಸರು ಬೈಕ್‌ ಟ್ಯಾಕ್ಸಿ ಸಂಘಟನೆಗೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಂಗಟನೆಯ ಸದಸ್ಯರು ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಎದುರು ಶಾಂತಿ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಂಘಟನೆಯ ಮುಖಂಡರಾದ ಕೊಟ್ಟಪ್ಪ ಹಾಗೂ ತಿಮ್ಮರೆಡ್ಡಿ ಅವರು, ” ಹೈಕೋರ್ಟ್ ಬೈಕ್‌ ಟ್ಯಾಕ್ಸಿ ನಿಷೇಧಿಸಿದ ನಂತರ ಬೈಕ್‌ ಚಾಲನೆಯನ್ನು ಜೀವನಾಧಾರ ಮಾಡಿಕೊಂಡಿದ್ದ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ತಮ್ಮ ಅಹವಾಲು ತಿಳಿಸಲು ಉದ್ದೇಶಿಸಿದ್ದೆವು. ಹಲವು ಬಾರಿ ಉಪ್ಪಾರಪೇಟೆ ಪೊಲೀಸರಿಗೆ ಮನವಿಯನ್ನು ಕೂಡ ಮಾಡಿದ್ದೆವು. ಆದರೆ ಜಾಗ ಖಾಲಿ ಇಲ್ಲ ಎಂಬ ನೆಪ ಹೇಳಿ ನಮಗೆ ಧರಣಿ ಕೈಗೊಳ್ಳಲು ಅವಕಾಶ ನಿರಾಕರಿಸಲಾಗುತ್ತಿದೆ. ಬೈಕ್‌ ಟ್ಯಾಕ್ಸಿ ನಂಬಿಕೊಂಡಿದ್ದ ನೂರಾರು ಕುಟುಂಬಗಳು ಬೀದಿಗೆ ಬಂದಿದ್ದರೂ ರಾಜ್ಯ ಸರ್ಕಾರ ನಮ್ಮ ಬಗ್ಗೆ ಗಮನ ಹರಿಸುತ್ತಿಲ್ಲ. ಬೈಕ್‌ ಟ್ಯಾಕ್ಸಿ ನಿಷೇಧದಿಂದಾಗಿ ನಮ್ಮ ಹಲವು ಚಾಲಕರು ಬಾಡಿಗೆ ಪಾವತಿಸಲು, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ದಿನಸಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 15 ದಿನದಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದೇ ರಾಜ್ಯದಲ್ಲಿ ಹುಟ್ಟಿ ಜೀವನ ನಡೆಸುತ್ತಿದ್ದೇನೆ. ದಯವಿಟ್ಟು ಬೈಕ್‌ ಟ್ಯಾಕ್ಸಿ ನಿಷೇಧ ತೆರವುಗೊಳಿಸಲು ಕ್ರಮ ವಹಿಸಬೇಕು” ಎಂದು ನೋವನ್ನು ತೋಡಿಕೊಂಡರು.

Advertisements

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಜೂನ್ 16 ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲು ಸರ್ಕಾರ ಹೊಸ ನಿಯಮಗಳನ್ನು ರೂಪಿಸದ ಕಾರಣ ನ್ಯಾಯಾಲಯವು ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಐಫೋನ್‌ ಕದ್ದು ರೀಲ್ಸ್ ಮಾಡಲು ಅಪ್ರಾಪ್ತರಿಂದ ಬೆಂಗಳೂರು ಯುವಕನ ಕೊಲೆ

ಬೈಕ್‌ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2 ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿದ್ದರು.

ಬೆಂಗಳೂರಿನಂತಹ ನಗರದಲ್ಲಿ, ಬೈಕ್ ಟ್ಯಾಕ್ಸಿಗಳು ಕಡಿಮೆ ವೆಚ್ಚದ, ತ್ವರಿತ ಮತ್ತು ಸುಲಭವಾಗಿ ಲಭ್ಯವಿರುವ ಸಾರಿಗೆ ಸೌಲಭ್ಯವಾಗಿತ್ತು. ಈ ಸೇವೆಯ ಮೂಲಕ ಜೀವನ ಹಾಗೂ ಕುಟುಂಬದ ನಿರ್ವಹಣೆ ಮಾಡಿಕೊಂಡಿದ್ದ ಚಾಲಕರಿಗೆ ಈಗ ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ. ಬೆಂಗಳೂರು ನಗರ ಒಂದರಲ್ಲೆ ಸುಮಾರು 1 ಲಕ್ಷಕ್ಕೂ ಅಧಿಕ ಗಿಗ್ ಕಾರ್ಮಿಕರು ಪೂರ್ಣಕಾಲಿಕ ಹಾಗೂ ಅರೆಕಾಲಿಕ ಬೈಕ್ ಟ್ಯಾಕ್ಸಿ ಸೇವೆಯ ಮೇಲೆ ಅವಲಂಬಿತರಾಗಿದ್ದರು. ಈ ಕಾರ್ಮಿಕರು ದಿನಕ್ಕೆ ಸರಾಸರಿ 10-12 ಗಂಟೆ ಕೆಲಸ ಮಾಡಿ, ತಮ್ಮ ಕುಟುಂಬ ನಿರ್ವಹಣೆ ಮಾಡಿಕೊಳ್ಳುತ್ತಿದ್ದರು. ಈಗ ಈ ಸೇವೆ ಸ್ಥಗಿತಗೊಂಡಿರುವುದರಿಂದ, ಅವರಿಗೆ ಪರ್ಯಾಯ ಉದ್ಯೋಗಗಳನ್ನು ಹುಡುಕುವುದು ತುರ್ತು ಅಗತ್ಯವಾಗಿದೆ. ಆದರೆ, ಕಡಿಮೆ ಶಿಕ್ಷಣ, ವೃತ್ತಿಪರ ತರಬೇತಿಯ ಕೊರತೆ ಮತ್ತು ಆರ್ಥಿಕ ಸಂಕಷ್ಟದಿಂದಾಗಿ ಇಂತಹ ಅವಕಾಶಗಳು ಸುಲಭವಾಗಿ ದೊರೆಯುವುದಿಲ್ಲ.

ಗಿಗ್ ಕಾರ್ಮಿಕರ ಮೇಲಿನ ಪರಿಣಾಮವು ಕೇವಲ ಆರ್ಥಿಕವಾಗಿ ಸೀಮಿತವಾಗಿಲ್ಲ. ಈ ಕಾರ್ಮಿಕರಲ್ಲಿ ಬಹುತೇಕರು ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ವಲಸೆ ಬಂದವರಾಗಿದ್ದು, ಕುಟುಂಬದ ಏಕೈಕ ಆದಾಯದ ಮೂಲವಾಗಿದ್ದರು. ಬೈಕ್ ಟ್ಯಾಕ್ಸಿ ಚಾಲಕರಿಗೆ ಈ ಉದ್ಯೋಗವು ತಮ್ಮ ಸಮಯವನ್ನು ಸ್ವತಂತ್ರವಾಗಿ ನಿರ್ವಹಿಸಿಕೊಳ್ಳಲು, ಕಡಿಮೆ ಹೂಡಿಕೆಯೊಂದಿಗೆ (ಕೇವಲ ಒಂದು ಬೈಕ್ ಮತ್ತು ಸ್ಮಾರ್ಟ್‌ಫೋನ್) ಆದಾಯ ಗಳಿಸಲು ಅವಕಾಶ ನೀಡಿತ್ತು. ಈಗ ಈ ಅವಕಾಶ ಕಸಿದುಕೊಳ್ಳಲಾಗಿದ್ದು, ಅವರ ಕುಟುಂಬದ ಜೀವನಮಟ್ಟದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರ ಜೊತೆಗೆ, ಈ ಕಾರ್ಮಿಕರಲ್ಲಿ ಕೆಲವರು ತಮ್ಮ ಬೈಕ್ ಖರೀದಿಗೆ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಂಡಿದ್ದು, ಆದಾಯವಿಲ್ಲದೆ ಸಾಲದ ಕಂತುಗಳನ್ನು ಪಾವತಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇವೆಲ್ಲವೂ ಚಾಲಕರಿಗೆ ಮಾನಸಿಕ ಒತ್ತಡ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.

ಬೈಕ್ ಟ್ಯಾಕ್ಸಿಗಳ ಮೇಲಿನ ಅವಲಂಬನೆಯು ಕೇವಲ ಚಾಲಕರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಈ ಸೇವೆಯನ್ನು ಪ್ರಯಾಣಿಕರೂ ವ್ಯಾಪಕವಾಗಿ ಬಳಸುತ್ತಿದ್ದರು. ಬೆಂಗಳೂರಿನಂತಹ ದಟ್ಟ ಜನಸಂಖ್ಯೆಯ ನಗರದಲ್ಲಿ, ಟ್ರಾಫಿಕ್ ಜಾಮ್‌ನಿಂದ ಕೂಡಿದ ರಸ್ತೆಗಳಲ್ಲಿ ಬೈಕ್ ಟ್ಯಾಕ್ಸಿಗಳು ತ್ವರಿತ ಮತ್ತು ಕೈಗೆಟುಕುವ ಸಾರಿಗೆ ಆಯ್ಕೆಯಾಗಿದ್ದವು. ಈ ಸೇವೆಯನ್ನು ವಿದ್ಯಾರ್ಥಿಗಳು, ಕಚೇರಿ ಉದ್ಯೋಗಿಗಳು, ಸಣ್ಣ ವ್ಯಾಪಾರಿಗಳು ಮತ್ತು ದಿನಗೂಲಿ ಕಾರ್ಮಿಕರು ಸೇರಿದಂತೆ ವಿವಿಧ ವರ್ಗದ ಜನರು ಬಳಸುತ್ತಿದ್ದರು. ವಿದ್ಯಾರ್ಥಿಗಳಿಗೆ, ತಮ್ಮ ಕಾಲೇಜುಗಳಿಗೆ ತೆರಳಲು ಕಡಿಮೆ ವೆಚ್ಚದ ಆಯ್ಕೆಯಾಗಿತ್ತು. ಉದ್ಯೋಗಿಗಳಿಗೆ, ಕಚೇರಿಗೆ ತಡವಾಗದಂತೆ ತಲುಪಲು ಇದು ಸಹಾಯಕವಾಗಿತ್ತು. ಈಗ ಈ ಸೇವೆ ಇಲ್ಲದಿರುವುದರಿಂದ, ಪ್ರಯಾಣಿಕರು ಆಟೋರಿಕ್ಷಾ, ಕ್ಯಾಬ್‌ಗಳು ಅಥವಾ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಬೇಕಾಗಿದೆ, ಇವು ಹೆಚ್ಚು ವೆಚ್ಚದಾಯಕವಾಗಿರುವುದರ ಜೊತೆಗೆ ಸಮಯಕ್ಕೆ ಸರಿಯಾಗಿ ತಲುಪಲು ಆಗದಿರುವುದರಿಂದ ತೊಂದರೆ ಅನುಭವಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X