ಉಡುಪಿ ಪ್ರಕರಣ | ಕಾಲೇಜು ಒಳಗಿನ ವಿಚಾರಗಳಿಗೆ ನಾವು ತಲೆ ಹಾಕಬಾರದು: ಸಚಿವ ಪರಮೇಶ್ವರ್‌

Date:

Advertisements
  • ಮಕ್ಕಳ ಆಟವೆಂದು ನಾನು ಹೇಳಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ
  • ‘ಈಗಾಗಲೇ ಪೊಲೀಸರು ಸುಮೋಟೋ ದಾಖಲಿಸಿಕೊಂಡಿದ್ದಾರೆ’

ಉಡುಪಿ ವಿಡಿಯೋ ಚಿತ್ರೀಕರಣದಂತಹ ಘಟನೆಗಳು ಸ್ನೇಹಿತರ ವಲಯದಲ್ಲಿ ಸಾಮಾನ್ಯವಾಗಿ ನಡೆಯುತ್ತವೆ. ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು. ಈ ಬಗ್ಗೆ ಸುಮ್ಮನೇ ರಾಜಕೀಯ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಾನು ಎಲ್ಲೂ ಈ ಪ್ರಕರಣವನ್ನು ಮಕ್ಕಳ ಆಟವೆಂದು ಹೇಳಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, “ಕಾಲೇಜು ಘಟನೆಗಳನ್ನು ಪ್ರಿನ್ಸಿಪಾಲ್​ಗೆ ಬಿಡಬೇಕು. ಅದಕ್ಕೆ ಅವರು ವಿದ್ಯಾರ್ಥಿಗಳನ್ನು ಸಸ್ಪೆಂಡ್​ ಮಾಡೋದು ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ. ನಾವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು” ಎಂದರು.

“ಇನ್ನು ಘಟನೆ ಕುರಿತು ಈಗಾಗಲೇ ಪೊಲೀಸರು ಸುಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತಿದೆ. ಸತ್ಯಾಸತ್ಯತೆ ಹೊರ ಬರುತ್ತೆ” ಎಂದು ಹೇಳಿದರು.

Advertisements

ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸುತ್ತಿದ್ದು, ಗೃಹ ಸಚಿವ ಪರಮೇಶ್ವರ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X