ಬೆಂಗಳೂರು ನಗರದಲ್ಲಿ ಮಹಿಳೆಯೊಬ್ಬರ ಭೀಕರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.
ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ. ನಿನ್ನೆ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ.
30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಎಸ್‌ಐ ಚಿಕಿತ್ಸೆ ಫಲಿಸದೆ ಸಾವು
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಎಸ್‌ಐ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ತಲಘಟ್ಟಪುರ ಪಿಎಸ್ ಮೆಹಬೂಬ್ ಗುಡ್ಡಳ್ಳಿ(40) ಮೃತರು. ಜೂ.24ರ ರಾತ್ರಿ ಗಾಂಜಾ ಕೇಸ್ ಆರೋಪಿಗಳನ್ನು ಬಂಧಿಸಿ ಅತ್ತಿಬೆಲೆಯಿಂದ ಬೆಂಗಳೂರು ಕಡೆ ಕರೆತರುತ್ತಿದ್ದಾಗ ಟೈರ್ ಕಳಚಿ ನಡುರಸ್ತೆಯಲ್ಲಿ ಪಿಎಸ್‌ಐ ಕಾರು ನಿಂತಿತ್ತು. ಪರಿಶೀಲನೆ ನಡೆಸಲು ಮೆಹಬೂಬ್ ಕಾರಿನಿಂದ ಕೆಳಗಿಳಿದಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಮೆಹಬೂಬ್ ಗುಡ್ಡಳ್ಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೊಡಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.