ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಶಮಿತಾ (14), ಕೊಪ್ಪ ತಾಲೂಕಿನ ಬೊಮ್ಲಾಪುರದ ಹೊಕ್ಕಳಿಕೆಯ ನಿವಾಸಿ. ಕೊಪ್ಪ ತಾಲೂಕಿನ ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ, ಚೂಡಿದಾರ್ ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪೊಲೀಸ್ ತನಿಖೆ ನಂತರ ತಿಳಿಯಬೇಕಿದೆ. ಈ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.