ಮೈಸೂರು ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಹುಲಿಗಳು ಸಾವನಪ್ಪಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷಣ ವಿಧಿಸಬೇಕು, ಕರ್ತವ್ಯಲೋಪ ಎಸಗಿರುವ ಹಿರಿಯ ಅಧಿಕಾರಿಗಳ ವಿರುದ್ಧವು ಶಿಸ್ತು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಒತ್ತಾಯಿಸಿದರು.
ಹುಲಿಗಳ ಬಗ್ಗೆ ಸಮಾಜ ಮತ್ತು ಸರ್ಕಾರ ಎರಡೂ ಬಹಳ ಪ್ರಾಮುಖ್ಯತೆ ಕೊಡುತ್ತವೆ. ಅಂತಹದರಲ್ಲಿ, ತಾಯಿ ಹುಲಿ ಹಾಗೂ 4 ಮರಿಗಳು ಸಾವಿಗೀಡಾಗಿರುವುದು ಆಘಾತಕಾರಿ ವಿಷಯ. ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಹಳಷ್ಟು ಜನದಟ್ಟಣೆಗೆ ಅವಕಾಶ ಮಾಡಿಕೊಟ್ಟಿರುವುದು ಇಂತಹ ಅನಾಹುತಗಳಿಗೆ ಕಾರಣವಾಗಿದೆ. ಹಾಗೂ ಅರಣ್ಯ ಪ್ರದೇಶಗಳಲ್ಲಿ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅವಘಡಗಳು ಹೆಚ್ಚಾಗುತ್ತದೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ರೈತರ 448 ಎಕರೆ ಭೂಮಿ ಕಬಳಿಸಲು ಮುಂದಾದ ಕೆಐಎಡಿಬಿ
ಪ್ರತಿಭಟನೆಯಲ್ಲಿ ವನ್ಯಜೀವಿ ಛಾಯಾಗ್ರಾಹಕ ಉಮೇಶ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ನಂಜುಂಡಿ, ರವಿಚಂದ್ರ, ನೀತು, ಮಂಜುನಾಥ್, ರವಿ, ಯತೀಶ್ ಬಾಬು, ಈಶ್ವರ್ ಸೇರಿದಂತೆ ಇನ್ನಿತರರು ಇದ್ದರು.