ರಾಜ್ಯ ಸರ್ಕಾರದ ʼಕಾಮ್ ಕಿ ಬಾತ್‌ʼ ಯಶಸ್ಸು ʼಮನ್ ಕಿ ಬಾತ್‌ನಲ್ಲಿ ಪ್ರಸ್ತಾಪ : ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಕರ್ನಾಟಕ ರಾಜ್ಯ ಸರ್ಕಾರದ ʼಕಾಮ್ ಕಿ ಬಾತ್‌ʼ ನ ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ʼಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ ಎಂದು ಸಚಿವರು ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ʼರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ, ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ ವರ್ಗವನ್ನು ಸೃಷ್ಟಿಸಿದ ಪರಿಣಾಮ ʼಕಲಬುರಗಿ ರೊಟ್ಟಿʼಗಳು ಇಂದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಶಕ್ತಿ ಒದಗಿಸಿದೆ. ರೊಟ್ಟಿಗಳ ಘಮ ಪ್ರಧಾನಿಯವರಿಗೂ ತಲುಪಿದೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisements

ʼಬ್ರ್ಯಾಂಡಿಂಗ್‌ಗಾಗಿ ರಾಜ್ಯ ಸರ್ಕಾರ ಸೀಡ್ ಫಂಡ್ ಒದಗಿಸಿದೆ. ಸ್ವಸಹಾಯ ಸಂಘಗಳು ಹಾಗೂ ಇತರ ಉತ್ಸಾಹಿ ಮಹಿಳೆಯರಿಗೆ ಸಬ್ಸಿಡಿಯಲ್ಲಿ ಸುಮಾರು 150 ರೊಟ್ಟಿ ಯಂತ್ರಗಳನ್ನು ಒದಗಿಸಲಾಗಿದೆ. ಸಿಎಸ್‌ಆರ್ ನಿಧಿಯ ಮೂಲಕ ₹6.5 ಲಕ್ಷ ಒದಗಿಸಲಾಗಿದೆ. ಪ್ಯಾಕಿಂಗ್, ಲೇಬಲಿಂಗ್ ಮತ್ತು ಬ್ರ್ಯಾಂಡಿಂಗ್ ನಲ್ಲಿ ನೆರವು ನೀಡಲಾಗುತ್ತಿದೆ. ಹೊರ ರಾಜ್ಯಗಳಲ್ಲೂ ಮಾರುಕಟ್ಟೆ ವಿಸ್ತರಿಸಲಾಗುತ್ತಿದೆ. ವಿದೇಶಗಳಿಗೆ ರಫ್ತು ಮಾಡುವ ಸಾಧ್ಯತೆಗಳ ಬಗ್ಗೆ ಪ್ರಯತ್ನ ಮಾಡಲಾಗುತ್ತಿದೆʼ ಎಂದು ತಿಳಿಸಿದ್ದಾರೆ.

ಸ್ವಿಗ್ಗಿ, ಜೋಮೊಟೊ, ಆಮೇಜಾನ್ ಸೇರಿದಂತೆ ಹಲವು ಪ್ರಸಿದ್ಧ ವೇದಿಕೆಗಳಲ್ಲೂ ಮಾರುಕಟ್ಟೆ ಸೃಷ್ಟಿಸಿಲಾಗಿದೆ. ಇದು ಕಾಂಗ್ರೆಸ್ ಸರ್ಕಾರದ ʼಕಾಮ್ ಕಿ ಬಾತ್ʼ! ʼರಿಪಬ್ಲಿಕ್ ಆಫ್ ಕಲಬುರಗಿʼ ಎನ್ನುತ್ತಿದ್ದ ಕರ್ನಾಟಕದ ಬಿಜೆಪಿ ನಾಯಕರಿಗೆ ಸ್ವತಃ ಪ್ರಧಾನಿಗಳೇ ʼಸಕ್ಸಸ್ ಸ್ಟೋರಿಸ್ ಆಫ್ ಕಲಬುರಗಿʼ ಎಂಬ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಲಬುರಗಿ | ದಲಿತರಿಗೆ ಕ್ಷೌರ ಮಾಡಲು ನಕಾರ; ಕ್ಷೌರಿಕನ ವಿರುದ್ಧ ಜಾತಿ ದೌರ್ಜನ್ಯ ಪ್ರಕರಣ ದಾಖಲು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X