ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನುಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ತೆಂಗಿನ ಮರಕ್ಕೆ ಕಟ್ಟಿ ಹಾಕಿ ದುಷ್ಕರ್ಮಿಗಳು, ಐವರು ಶ್ರೀರಾಮಸೇನೆಯ ಕಾರ್ಯಕರ್ತರಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ
ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಶ್ರೀರಾಮಸೇನೆ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿದ್ದರು ಎನ್ನಲಾಗಿದೆ. ಈ ಗೋವುಗಳನ್ನು ಇಂಗಳಿ ಬಳಿಯ ಗೋಶಾಲೆಯಲ್ಲಿ ರವಾನಿಸಲಾಗಿತ್ತು. ಇದೀಗ ಕೆಲವರು ಗೋಶಾಲೆಯಲ್ಲಿದ್ದ ಗೋವುಗಳನ್ನು ಬೇರೆಡೆಗೆ ರವಾನಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಇದನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ. ಹೀಗಾಗಿ ದುಷ್ಕರ್ಮಿಗಳು ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.