ದಕ್ಷಿಣ ಕನ್ನಡ | ಜುಲೈ 9 ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

Date:

Advertisements

ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ವನ್ನು ಯಶಸ್ವಿಗೊಳಿಸಲು ಎ.ಐ.ಸಿ.ಸಿ.ಟಿ.ಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ಸಮಾವೇಶ ಇಂದು ಬಿ.ಸಿ.ರೋಡ್ ನ ಡಾ. ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಮಾವೇಶವನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ರಾಜ್ಯ ಅಧ್ಯಕ್ಷರಾದ ಕಾಮ್ರೇಡ್ ಪಿ.ಪಿ ಅಪ್ಪಣ್ಣ ಮಾತನಾಡಿ ಕೇಂದ್ರದ ಬಿ.ಜೆ.ಪಿ ಸರಕಾರದ 11 ವರ್ಷಗಳ ಆಡಳಿತದಲ್ಲಿ ದುಡಿಯುವ ಜನರ ಸಂಕಷ್ಟಗಳು ಮಿತಿಮೀರಿದೆ. ದುಡಿಯುವ ಜನತೆಗೆ ಕನಿಷ್ಠ ಕೂಲಿ ಕೂಡಾ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಪೋರೇಟ್ ಧಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮೋದಿ ಸರಕಾರ ಕಾರ್ಮಿಕರ ಎಂಟು ಗಂಟೆಗಳ ಕೆಲಸದ ಹಕ್ಕನ್ನು ಕಿತ್ತುಹಾಕಿ ವಾರದಲ್ಲಿ ಎಪ್ಪತ್ತು ಗಂಟೆ ದುಡಿಯುವಂತೆ ಕಾಯ್ದೆಯ ಮೂಲಕ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದರು.

1005996014

ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದಿಂದ ಜಾರಿಯಾದ ಕಾರ್ಮಿಕ ಕಾನೂನುಗಳನ್ನು ತೆಗೆದು ಹಾಕಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದ್ದು ಈ ಸಂಹಿತೆಗಳು ಜಾರಿ ಆದರೆ ಕಾರ್ಮಿಕರು ಕಾರ್ಪೊರೇಟ್ ವರ್ಗದ ಗುಲಾಮರಾಗಬೇಕಾಗುತ್ತದೆ ಹಾಗೂ ಕಾರ್ಮಿಕರ ಎಲ್ಲಾ ಹಕ್ಕುಗಳು ಕಸಿಯಲ್ಪಡುತ್ತದೆ ಎಂದರು. ಈ ನಿಟ್ಟಿನಲ್ಲಿ ಜುಲೈ 9 ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಪಾಲ್ಗೊಂಡು ಮುಷ್ಕರ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

Advertisements

ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ಕಾ.ರಾಮಣ್ಣ ವಿಟ್ಲ ಮಾತನಾಡಿ ಕಾರ್ಮಿಕ ವರ್ಗ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕೆಂದು ಕರೆ ನೀಡಿದರು. ಎ.ಐ.ಸಿ.ಸಿ.ಯು‌ ಜಿಲ್ಲಾ ಕಾರ್ಯದರ್ಶಿ ಕಾ.ಮೋಹನ್ ಕೆ.ಇ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ಕಾ.ವಿನಯ ನಡುಮೊಗರು, ಅಖಿಲ ಭಾರತ ಕಿಸಾನ್ ಮಹಾಸಭಾದ ಮುಖಂಡರಾದ ಕಾ.ಮಹಮ್ಮದ್ ಇಕ್ಬಾಲ್ ಹಳೆಮನೆ, ಕಾ. ಮಹಾವೀರ್ ಜೈನ್ ಪುತ್ತೂರು, ಕಾ.ಸಂಜೀವ ಬೆಳ್ತಂಗಡಿ. ಸುಲೈಮಾನ್ ಕೆಳಿಂಜ, ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಮುಖಂಡರಾದ ಕಾ.ಭರತ್ ಕುಮಾರ್, ಕಾ .ಸತೀಶ್ ಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ಸುಧಾ ರಾವ್ ಬೆಳ್ತಂಗಡಿ ಮುಂತಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X