ತೆಲಂಗಾಣದ ನೆರೆಯ ಸಂಗರೆಡ್ಡಿ ಜಿಲ್ಲೆಯ ಫಾರ್ಮಾ ಪ್ಲಾಂಟ್‌ನಲ್ಲಿ ಸೋಮವಾರ ಸ್ಪೋಟ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ 14 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ವಿಶ್ಲೇಷಣೆ | ತೆಲಂಗಾಣ, ಆಂಧ್ರದಲ್ಲಿ ಒಳಮೀಸಲಾತಿ ಹಂಚಿಕೆ ಹೇಗೆ ಮಾಡಲಾಗಿದೆ?
VIDEO | Telangana: A massive explosion at Sigachi Chemical Industry in Pashamilaram, Sangareddy district, has resulted in several deaths and serious injuries. The blast threw workers up to 100 meters away, trapping many in nearby tents as fires continued to rage. Firefighters are… pic.twitter.com/eLtDX0bY4Y
— Press Trust of India (@PTI_News) June 30, 2025
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಸುಮಾರು 22ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನು ಸ್ಪೋಟದಿಂದಾಗಿ ಅಗ್ನಿ ಅವಘಡ ಉಂಟಾದ ಬಳಿಕ ಮೂರು ಅಂತಸ್ತಿನ ಕಟ್ಟಡವೂ ಕುಸಿದಿದೆ. ಇದರಿಂದಾಗಿ ಪರಿಸ್ಥಿತಿ ಇನ್ನಷ್ಟೂ ಬಿಗಡಾಯಿಸಿದೆ ಎನ್ನಲಾಗಿದೆ.
