ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ, ಹೃದಯದಿಂದ ಜನಸೇವೆ ಮಾಡಿ: ಕೃಷ್ಣಭೈರೇಗೌಡ

Date:

Advertisements
  • ಕಂದಾಯ ದಿನಾಚರಣೆ, ಕಾರ್ಯಾಗಾರ ಉದ್ಘಾಟಿಸಿ ಅಭಿಮತ
  • ‘ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ’

ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ನೌಕರರೂ ಸಹ ಮಾತೃ ಹೃದಯದಿಂದ ಜನಸೇವೆಗೆ ಮುಂದಾಗಬೇಕು ಎಂದು ಸಚಿವ ಕೃಷ್ಣಭೈರೇಗೌಡ ಕಿವಿಮಾತು ಹೇಳಿದರು.

ಕಂದಾಯ ದಿನಾಚರಣೆಯ ಅಂಗವಾಗಿ ಇಲಾಖೆ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ನೌಕರರಿಗೆ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡಿದರು.

“ಹಿಂದಿನ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದ ಜನ ಭರವಸೆಯಿಂದ ನಮಗೆ ಅಧಿಕಾರ ನೀಡಿದ್ದಾರೆ. ನಮ್ಮ ಸರ್ಕಾರದ ಮೇಲೆ ಜನರಿಗೆ ಭರವಸೆ ಇದೆ. ಆದರೆ, ಸರ್ಕಾರಿ ನೌಕರರ ಸಹಕಾರ ಇಲ್ಲದೆ ಜನಸೇವೆ ಹಾಗೂ ಉತ್ತಮ ಆಡಳಿತ ಅಸಾಧ್ಯ. ನಮ್ಮೆಲ್ಲರ ಮೇಲೆ ಜವಾಬ್ದಾರಿ ಇದೆ. ಕಂದಾಯ ಇಲಾಖೆ‌ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಹೇಳಿದರೆ ಮಾತ್ರ ಸಾಲದು. ಜನಸೇವೆಯನ್ನೂ ಮಾತೃ ಹೃದಯದಿಂದ ಮಾಡಬೇಕು” ಎಂದರು.

Advertisements

“ಕಂದಾಯ ಇಲಾಖೆ ಮನಸ್ಸು ಮಾಡಿದರೆ ಜನರಿಗೆ ಒಳ್ಳೆಯದನ್ನೂ ಮಾಡಬಹುದು ಕೆಟ್ಟದ್ದನ್ನೂ ಮಾಡಬಹುದು. ಆದರೆ, ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ. ಕಂದಾಯ ಇಲಾಖೆ ಪ್ರತಿದಿನ ಒಂದಲ್ಲಾ ಒಂದು ರೀತಿಯಲ್ಲಿ ಜನರ ಜೊತೆಗೆ ಸಂಪರ್ಕ ಹೊಂದಿರುವ ಇಲಾಖೆ. ಜನ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ಅವಕಾಶ ಸಿಗದವರು ಕೋಟ್ಯಂತರ ಜನ ಹೊರಗಿದ್ದಾರೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ನಿಮ್ಮ ನ್ಯಾಯಯುತ ಕೋರಿಕೆಗಳನ್ನು ಈಡೇರಿಸಲೂ ಸಹ ನಾವು ಸಿದ್ದರಾಗಿದ್ದೇವೆ. ಈಗಾಗಲೇ ಕಂದಾಯ ಇಲಾಖೆ ಆಯುಕ್ತಾಲಯವನ್ನು ಕೇವಲ ಎರಡು ತಿಂಗಳಲ್ಲಿ ನಿರ್ಮಿಸಲಾಗಿದೆ. ಮುಂಬಡ್ತಿಗೆ ಸಂಬಂಧಿಸಿದ ನಿಮ್ಮ ಕೋರಿಗೆಯ ಬಗ್ಗೆಯೂ ಚಿಂತಿಸಲಾಗುವುದು” ಎಂದು ಕೃಷ್ಣಭೈರೇಗೌಡ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಂಘದ ವೆಬ್ಸೈಟ್ ಬಿಡುಗಡೆ ಮಾಡಲಾಯಿತು. ‌ಸಚಿವರ ತಂದೆ ದಿವಂಗತ ಮಾಜಿ ಸಚಿವ ಸಿ ಭೈರೇಗೌಡ ಅವರ ವರ್ಣಚಿತ್ರ ಉಡುಗೊರೆಯಾಗಿ ನೀಡಲಾಯಿತು. ಕೆಎಎಸ್ ಸಂಘದ ಅಧ್ಯಕ್ಷ ರವಿ ತಿರ್ಲಾಪುರ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X