ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಕೋಮುಲ್)ದ ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನಸ್ ಷರೀಫ್ ಅವರನ್ನು ನೇಮಕ ಮಾಡಲಾಗಿದೆ.
ಸರ್ಕಾರದ ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿ ಸಹಕಾರ ಇಲಾಖೆಯ ಜಿ ರಂಗನಾಥ್ ನೇಮಕ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಕೋಲಾರ | ಕಾಂಗ್ರೆಸ್ ಶಾಸಕರ ನಡುವೆ ಪೈಪೋಟಿ; ಕೋಮುಲ್ ಅಧಿಕಾರದ ಗದ್ದುಗೆ ಯಾರಿಗೆ?
ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಯ ಕೋಚಿಮುಲ್ ಆಡಳಿತ ಮಂಡಳಿಗೂ ಯೂನಸ್ ಷರೀಫ್ ಅವರನ್ನೇ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಕೋಮುಲ್ ಒಕ್ಕೂಟವು ಪ್ರತ್ಯೇಕವಾದ ನಂತರವೂ ಅವರನ್ನೇ ನೇಮಕ ಮಾಡಿ ಆದೇಶ ಮಾಡಲಾಗಿದೆ.