ನಗರದ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಯುವಕ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸೋಮವಾರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ.
ಪ್ರಕರಣದ 1ನೇ ಆರೋಪಿ ಸಚಿನ್ ಟಿ, 3ನೇ ಆರೋಪಿ ಮಂಜುನಾಥ್ ಮತ್ತು 4ನೇ ಆರೋಪಿ ನಟೇಶ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ: ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ
2025ರ ಏಪ್ರಿಲ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೇರಳ ಮೂಲದ ಮುಸ್ಲಿಂ ಯುವಕ ಅಶ್ರಫ್‌ನನ್ನು ಕ್ರಿಕೆಟ್ ಆಡುತ್ತಿದ್ದವರ ಗುಂಪು ಅಮಾನುಷವಾಗಿ ಥಳಿಸಿ ಕೊಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.