ವಿಕ್ಟೋರಿಯಾ ಆಸ್ಪತ್ರೆ | 26 ರೋಗಿಗಳಿದ್ದ ಕೊಠಡಿಯಲ್ಲಿ ಅಗ್ನಿ ಅವಘಡ

Date:

Advertisements

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದು, ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ 26 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ವಾರ್ಡ್‌ನಲ್ಲಿ 14 ಪುರುಷರು, 5 ಮಹಿಳೆಯರು ಹಾಗೂ 7 ಮಕ್ಕಳು ಇದ್ದು, ಐಸಿಯುನಲ್ಲಿ 5 ರೋಗಿಗಳನ್ನು ದಾಖಲಿಸಲಾಗಿತ್ತು. ಭಾರಿ ಹೊಗೆಯ ಕಾರಣದಿಂದ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ, 26 ರೋಗಿಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್‌ಗೆ ಸ್ಥಳಾಂತರಿಸಲಾಗಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವೈದ್ಯಕೀಯ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ಸ್ವಿಚ್ ಬೋರ್ಡ್​​​ನಲ್ಲಿ ಶಾರ್ಟ್ ಸರ್ಕ್ಯೂಟ್​ ಆಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ತಕ್ಷಣ ಕಾರ್ಯಪ್ರವೃತ್ತರಾಗಿದ್ದರಿಂದ ಕೂಡಲೇ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Advertisements
WhatsApp Image 2025 07 01 at 8.39.04 AM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X