ಕ್ರಿಕೆಟ್ ಪಂದ್ಯದ ಬಗ್ಗೆ ವಿವಾದ ಉಂಟಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಸುನ್ಹೇಡಾ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಅಜಯ್ ಪನ್ವರ್ ಎಂದು ಗುರುತಿಸಲಾಗಿದೆ. ಅಜಯ್ ಸಹರಾನ್‌ಪುರದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು. ಒಂದು ತಿಂಗಳ ರಜೆಯಲ್ಲಿದ್ದರು. ಸದ್ಯ ಪೊಲೀಸರು ಎನ್‌ಕೌಂಟರ್ ನಡೆಸಿ ಆರೋಪಿ, ಶಾಲಾ ಶಿಕ್ಷಕ ಮೋಹಿತ್‌ನ ಬಂಧನ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಪೂರ್ವಜರ ಆಸ್ತಿ ಹರಾಜು
ಕೆಲವು ದಿನಗಳ ಹಿಂದೆ ಸ್ಥಳೀಯ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಅಜಯ್ ಅದೇ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮೋಹಿತ್ ಎಂಬ ಆರೋಪಿಯೊಂದಿಗೆ ವಾಗ್ವಾದ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ, ಅಜಯ್ ವಾಕಿಂಗ್‌ಗೆ ಹೋಗಿದ್ದಾಗ ಮೋಹಿತ್ ಜೊತೆ ಮತ್ತೊಮ್ಮೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಮೋಹಿತ್ ಗುಂಡು ಹಾರಿಸಿದ್ದು ಅಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಕೊಲೆಯ ನಂತರ ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ರೈ ಆರೋಪಿಯ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಿದರು. ಸುಳಿವು ದೊರೆತ ನಂತರ, ಪೊಲೀಸರು ಮೋಹಿತ್‌ನನ್ನು ಗ್ರಾಮದ ಬಳಿಯ ಮೈದಾನದಲ್ಲಿ ಪತ್ತೆಹಚ್ಚಿದರು. ಈ ವೇಳೆ ಮೋಹಿತ್ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರೂ ಪ್ರತಿ ದಾಳಿ ನಡೆಸಿದ್ದು, ಮೋಹಿತ್ ಕಾಲಿಗೆ ಗುಂಡೇಟು ತಗುಲಿದೆ. ಬಳಿಕ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಗಾಯಗೊಂಡ ಆರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
