ಶಿವಮೊಗ್ಗ, ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ.ಶ್ರೀನಿಧಿ (21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ.ಜೂನ್ 29 ರ ಭಾನುವಾರ ಮುಂಜಾನೆ ಶ್ರೀನಿಧಿ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ.ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ