ಶಿವಮೊಗ್ಗ | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ : ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

Date:

Advertisements

ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

“ನಾವುಗಳು ಸುಮಾರು 16 ವರ್ಷದಿಂದ ಆಶಾ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ನಮಗೆ ಮಾಸಿಕ ವೇತನ ರೂ. 5,000=00ಗಳು ಮತ್ತು ಗೌರವ ಧನ ರೂ.2,000=00ಗಳನ್ನು ನೀಡುತ್ತಿದ್ದು, ಇದರಿಂದ ನಮ್ಮಗಳ ಜೀವನ ನಿರ್ವಾಹಣೆ ಕಷ್ಟವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮತ್ತು ಕೆಲಸದ ಅತಿಯಾದ ಒತ್ತಡದಿಂದ ನಮ್ಮ ಆರೋಗ್ಯ ತುಂಬಾ ಹದಗಟ್ಟಿರುತ್ತದ. ನಮಗೆ ಗರ್ಭಿಣಿ, ಮತ್ತು ಬಾಣಂತಿ ಆರೈಕ, ಮಕ್ಕಳ ಆರೈಕೆ, ಮಕ್ಕಳ ಲಸಿಕೆ ಕಾರ್ಯಕ್ರಮ, ಕಫ ಸಂಗ್ರಹಣೆ, ಲಾರ್ವ ಸರ್ವೆ, ಮನ ಮನೆ ಸಮೀಕ್ಷೆ, ಮೊಬೈಲ್ ಆಪ್ ಮೂಲಕ ಎನ್‌.ಸಿ.ಡಿ ಕಾರ್ಯಕ್ರಮ, ಅಂದತ್ವ ನಿವಾಹರಣಾ ಕಾರ್ಯಕ್ರಮ ಮತ್ತು 1-18 ವರ್ಷ ದೊಳಗಿನ ಮಕ್ಕಳ ಆಧಾರ್ ಕಾರ್ಡ್ ಸಂಗ್ರಹಣೆ ಇನ್ನಿತರ ಹಲವಾರು ಕೆಲಸಗಳನ್ನು ನಾವುಗಳು ಮಾಡಬೇಕಾಗಿದ್ದು,

Advertisements

ಇದರಿಂದ ನಮಗೆ ಮಾನಸಿಕ ಮತ್ತು ದೈಹಿಕ ಹಿಂಸೆ ಉಂಟಾಗುತ್ತಿದೆ. ಇದರಿಂದ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ತಾವುಗಳು ಪರಿಶೀಲಿಸಿ, ಕೆಲಸದ ಒತ್ತಡ ಹೆಚ್ಚಿದ್ದು, ಸಂಬಳ ಕಡಿಮೆ ಇದ್ದು ಜೀವನ ನಿರ್ವಾಹಣೆ ಮಾಡಲು ತೊಂದರೆಯಾಗುತ್ತಿದ್ದು, ಈ ಕಾರಣದಿಂದ ನಮ್ಮಗಳ ಕೆಲಸಕ್ಕೆ ಸಾಮೂಹಿಕ ರಾಜಿನಾಮೆ” ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X