ಉಡುಪಿ | ವಿದ್ಯಾರ್ಥಿವೇತನ ಸಮಸ್ಯೆ ಬಗೆಹರಿಸುವಂತೆ ಎಸ್ ಐ ಓ ವತಿಯಿಂದ ಡಿಸಿಗೆ ಮನವಿ

Date:

Advertisements

ಎಸ್‌ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು ಮನದಟ್ಟು ಮಾಡಲಾಯಿತು. ಈ ಹಿಂದೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ (NSP) ಮೂಲಕ ಲಭ್ಯವಿದ್ದ ಈ ವೇತನವನ್ನು ಇದೀಗ ರದ್ದುಪಡಿಸಲಾಗಿದ್ದು, ಪ್ರಸ್ತುತ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ (SSP) ಕೇವಲ 8ನೇ ತರಗತಿವರೆಗೆ ಮಾತ್ರ ಸಹಾಯಧನ ನೀಡುತ್ತಿದೆ. ಇದರ ಪರಿಣಾಮವಾಗಿ ಅನೇಕ ವಿದ್ಯಾರ್ಥಿಗಳು ಶಾಲೆ ಬಿಡುವಂತಹ ದುರಂತಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಆದರಿಂದ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್( SSP ) ನ್ನು 9 ನೇ ಮತ್ತು 10 ನೇ ತರಗತಿಯವರೆಗೆ ವಿಸ್ತರಿಸುವಂತೆ ಹಾಗೂ ಈ ಸಮಸ್ಯೆಯನ್ನು ತಕ್ಷಣದ ಮಟ್ಟಿಗೆ ಗಮನಿಸಿ ಮುಖ್ಯಮಂತ್ರಿಗಳ ಕಚೇರಿಗೆ ಮನವಿಯನ್ನು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಎಸ್ ಐ ಓ ಉಡುಪಿಯ ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ , ಸಫಾನ್ , ಅದ್ನಾನ್ , ನಿಹಾಲ್ , ನಿಫಾಲ್ ಮತ್ತು ಸದಸ್ಯರಾದ ಅಯಾನ್ ಮಲ್ಪೆ ,ಅಸೀಮ್ , ರಿಯಾನ್ ನಕ್ವಾ ಉಪಸ್ಥಿತರಿದ್ದರು.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X