ಖಾಲಿ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ತಡೆಯಿರಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

Date:

Advertisements

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಖಾಲಿ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ಹೆಸರಘಟ್ಟ ಮುಖ್ಯ ರಸ್ತೆ ಸಪ್ತಗಿರಿ ಮೆಡಿಕಲ್ ಕಾಲೇಜಿನಿಂದ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ರಸ್ತೆ ಬದಿ, ಖಾಲಿ ಸ್ಥಳಗಳಲ್ಲಿ ಕಸ ಬಿಸಾಡಿ ಬ್ಲ್ಯಾಕ್ ಸ್ಪಾಟ್‌ಗಳು ನಿರ್ಮಾಣವಾಗುತ್ತವೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ಎದುರುಗಡೆ ಇರುವ ಅಡ್ಡಮೋರಿ (ಕಲ್ವರ್ಟ್)ಯ ಬಳಿ ರಸ್ತೆ ಕಿರಿದಾಗಿದ್ದು, ರಸ್ತೆಯನ್ನು 7.5 ಮೀಟರ್ ಗೆ ಅಗಲಗೊಳಿಸಲು ಸೂಚಿಸಿದರು. ಹೆಸರಘಟ್ಟ ಮುಖ್ಯ ರಸ್ತೆ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ಬಳಿ ರಸ್ತೆ ಅಗಲೀಕರಣ ಕಾರ್ಯ ಪ್ರಕ್ರಿಯೆಲ್ಲಿದ್ದು, ಅಗಲೀಕರಣಕ್ಕಾಗಿ ಪಡೆದಿರುವ ಜಾಗವನ್ನು ಕೂಡಲೆ ಪಾಲಿಕೆಗೆ ವಶಪಡಿಸಿಕೊಳ್ಳಲು ಸೂಚಿಸಿದರು.

Advertisements
WhatsApp Image 2025 07 01 at 5.45.32 PM

ಕಿರ್ಲೋಸ್ಕರ್ ಜಂಕ್ಷನ್ ಅಭಿವೃದ್ಧಿಪಡಿಸಿ:

ಹೆಸರುಘಟ್ಟ ರಸ್ತೆ ಕಿರ್ಲೋಸ್ಕರ್ ಜಂಕ್ಷನ್‌ನಲ್ಲಿ ವಾಹನಗಳು ಸರಾಗವಾಗಿ ಸಂಚರಿಸುವ ಸಂಬಂಧ ಅಡೆತಡೆಗಳನ್ನು ನಿವಾರಿಸಿ ಜಂಕ್ಷನ್ ಅಭಿವೃದ್ಧಿಗೊಳಿಸಬೇಕು. ಜಂಕ್ಷನ್ ಬಳಿಯಿರುವ ಕೃಷ್ಣ ಭವನ ಹೋಟೆಲ್ ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ದು, ಅದನ್ನು ಕೂಡಲೇ ತೆರವುಗೊಳಿಸಲು ಸೂಚಿಸಿದರು.

ಕಿರ್ಲೋಸ್ಕರ್ ಲೇಔಟ್ ನ ರಸ್ತೆಗಳಲ್ಲಿ ತುಂಬಾ ಕೆಳಭಾಗದಲ್ಲಿ ವಾಹನಗಳಿಗೆ ತಾಗುವ ರೀತಿಯಲ್ಲಿ ಇರುವ ಮರಗಳ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಬೇಕು. ಜೊತೆಗೆ ಅಪಾಯಕಾರಿಯಾದ ಮತ್ತು ಒಣಗಿರುವ ಮರಗಳನ್ನು ತೆರವುಗೊಳಿಸಿ ಹೊಸದಾಗಿ ಸಸಿಗಳನ್ನು ನೆಡಲು ಕ್ರಮ ವಹಿಸಲು ಸೂಚಿಸಿದರು.

WhatsApp Image 2025 07 01 at 5.43.03 PM

ನೇವಿ ಬಡಾವಣೆಯ ಕೆಲ ರಸ್ತೆಗಳಲ್ಲಿ ಜಲಮಂಡಳಿ ವತಿಯಿಂದ ಅಗೆದಿದ್ದು, ಅದನ್ನು ದುರಸ್ತಿಗೊಳಿಸದೆ ಹಾಗೆಯೇ ಬಿಟ್ಟಿರುವುದನ್ನು ಗಮನಿಸಿ, ಹಾಳಾಗಿರುವ ರಸ್ತೆಯ ಭಾಗವನ್ನು ಸರಿಪಡಿಸುವಂತೆ ಸೂಚಿಸಿದರು.

ರಸ್ತೆ ಬದಿ ಸೋಫಾ, ಕುರ್ಚಿ, ಪೀಠೋಪಕರಣಗಳು, ಬಟ್ಟೆ, ದಿಂಬು, ಹಾಸಿಗೆ, ಶೌಚಾಲಯದ ಟೈಲ್ಸ್, ಕಮೋಡ್ ಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಬಿಸಾಡಿದ್ದು, ಅದನ್ನು ಒಣತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಪುನರ್ ಬಳಕೆ ಮಾಡಲು ವ್ಯವಸ್ಥೆ ಮಾಡಲು ಸೂಚಿಸಿದರು. ಜೊತೆಗೆ ಇನ್ನು ಮುಂದೆ ರಸ್ತೆ ಬದಿ ಬಿಸಾಡದಂತೆ ಸಾರ್ವಜನಿಕರೇ ಸ್ವತಃ ಘಟಕಕ್ಕೆ ತಂದುಕೊಡುವ ವ್ಯವಸ್ಥೆ ನಿರ್ಮಿಸಲು ಹಾಗೂ ಆಸಕ್ತ ಹಿರಿಯ ನಾಗರಿಕರು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಅನುವು ಮಾಡುವಂತೆ ಸೂಚಿಸಿದರು.

ಚೊಕ್ಕಸಂದ್ರ ವಾರ್ಡ್‌ನಲ್ಲಿರುವ ಕಚ್ಚಾ ನೀರುಗಾಲುವೆಗಳನ್ನು ಆರ್.ಸಿ.ಸಿ ಗೋಡೆ ನಿರ್ಮಿಸಿ ಅಭಿವೃದ್ಧಿಗೊಳಿಸಬೇಕು. ಈ ಸಂಬಂಧ ಮೂಲ ಗ್ರಾಮ ನಕ್ಷೆ/ಸರ್ವೇ ದಾಖಲೆಗಳಲ್ಲಿರುವ ಅಲೈನ್ ಮೆಂಟ್ ನಂತೆ ಹಾಗೂ ಅಳತೆಗಳಂತೆ ನೀರುಗಾಲುವೆ ನಿರ್ಮಿಸಲು ಸೂಚಿಸಿದರು. ಅದಲ್ಲದೆ ನೀರುಗಾಲುವೆಯಲ್ಲಿ ಹೋಳೆತ್ತಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಲು ಸೂಚಿಸಿದರು.

ಇದನ್ನು ಓದಿದ್ದೀರಾ? ‘ಜಾತ್ಯತೀತತೆ, ಸಮಾಜವಾದವೇ ನಮ್ಮ ಸಂವಿಧಾನದ ತಳಹದಿ’ ಎಂದಿದ್ದರು ಅಂಬೇಡ್ಕರ್; ಇಲ್ಲಿದೆ ಪುರಾವೆ!

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಹೆಸರಘಟ್ಟ ಮುಖ್ಯ ರಸ್ತೆ ಸಪ್ತಗಿರಿ ಮೆಡಿಕಲ್ ಕಾಲೇಜಿನಿಂದ ತುಮಕೂರು ರಸ್ತೆ ಕಡೆಗೆ, ಕಿರ್ಲೋಸ್ಕರ್ ಲೇಔಟ್, ನೇವಿ ಲೇಔಟ್ ವರೆಗೆ 2.5 ಕಿ.ಮೀ ರಷ್ಟು ನಡಿಗೆಯ ಮೂಲಕ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ಈ ವೇಳೆ ವಲಯ ಆಯುಕ್ತರಾದ ನವೀನ್ ಕುಮಾರ್ ರಾಜು, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X