ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅನುಮತಿ: ಮಾರ್ಗಸೂಚಿ ಬಿಡುಗಡೆ

Date:

Advertisements

ರಾಜ್ಯ ಸರ್ಕಾರ ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.

ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಿಷೇಧದ ವಿರುದ್ಧ ಬೈಕ್‌ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಮಾರ್ಗಸೂಚಿಯಲ್ಲಿ ಏನಿದೆ?
– ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
– ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
– ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
– ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X