ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿದೆ.
ಕೋತಿಗಳನ್ನು ವಿಷ ನೀಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ನಂತರ ಇಲ್ಲಿ ತಂದು ಹಾಕಿರುವ ಅನುಮಾನವೂ ವ್ಯಕ್ತವಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ
ಮೇಲ್ನೋಟಕ್ಕೆ ವಿಷಪ್ರಾಶನ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶವು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ. ಮಾಹಿತಿ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.