ಶಾಲಾ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಮನವಿ ಮಾಡಿದ ಶಿಕ್ಷಣ ಇಲಾಖೆ

Date:

Advertisements

ರಾಜ್ಯದಲ್ಲಿ ನಡೆಯುವ ಚುನಾವಣಾ ಕೆಲಸಗಳಿಗೆ ಶಾಲಾ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ.

ಚುನಾವಣಾ ಕಾರ್ಯಗಳಿಗಾಗಿ ಶಾಲೆಯ ಶಿಕ್ಷಕರನ್ನು ನಿಯೋಜನೆ ಮಾಡಲಾಗುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರ ಕೆಲಸಗಳಿಗೆ ಶಿಕ್ಷಕರನ್ನು ನಿಯೋಜಿಸದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಬಿಬಿಎಂಪಿಗೆ ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ ಶಿಕ್ಷಕರ ನಿಯೋಜನೆಯನ್ನು ಚುನಾವಣಾ ಕೆಲಸಗಳಿಗೆ ನಿರ್ಬಂಧಿಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರ ಬರೆದಿದ್ದಾರೆ.

Advertisements

“ಶಾಲಾ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಕೆಲಸಗಳಿಗೆ ನಿಯೋಜನೆ ಮಾಡುವುದರಿಂದ ನಮ್ಮ ವೇಳಾಪಟ್ಟಿಗೆ ತೊಂದರೆ ಆಗುತ್ತದೆ. ಏಕೆಂದರೆ, ಸಾರ್ವಜನಿಕ ರಜಾದಿನಗಳು, ದಸರಾ ಮತ್ತು ಬೇಸಿಗೆ ರಜೆಯನ್ನು ಪರಿಗಣಿಸಿ ಶಾಲಾ ಶಿಕ್ಷಕರಿಗೆ 244 ಕೆಲಸದ ದಿನಗಳನ್ನು ನಿಗದಿ ಮಾಡಲಾಗಿದೆ. ಪಠ್ಯೇತರ ಚಟುವಟಿಕೆಗಳು, ಪರೀಕ್ಷೆಗಳು ಮತ್ತು ಮೌಲ್ಯಮಾಪನ ಕಾರ್ಯಗಳನ್ನು ನಡೆಸಲು 64 ದಿನ ಮೀಸಲಿಡಲಾಗಿದೆ” ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಳೆಯ ಅಬ್ಬರ; ಟೊಮೆಟೊ ಬೆಲೆ ಮತ್ತಷ್ಟು ಏರಿಕೆ!

“ಶಾಲಾ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಕೆಲಸಕ್ಕೆ ನಿಯೋಜಿಸುವುದರಿಂದ ವೇಳಾಪಟ್ಟಿಗೆ ತೊಂದರೆಯಾಗುತ್ತದೆ. ರಜೆಗಳ ವ್ಯತ್ಯಾಸದಿಂದ ಪರಿಣಾಮ ಬೀರುತ್ತದೆ. ಶಾಲೆಗಳಲ್ಲಿ ಬೋಧನೆಯ ಗುಣಮಟ್ಟ ಕಡಿಮೆಯಾಗುತ್ತದೆ. ಹಾಗಾಗಿ, ಶಿಕ್ಷಕರನ್ನು ಚುನಾವಣಾ ಕೆಲಸಗಳಿಗೆ ನಿಯೋಜಿಸಬೇಡಿ” ಎಂದು ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X