ರಾಜ್ಯದಲ್ಲಿ ಹಲವೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಬೆಳೆ ಫಲ ನೀಡದೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ರೈತ ರಾಜೇಂದ್ರ ಮುನಿಯಪ್ಪ ಚಿನ್ನಣ್ಣನವರ ಆರು ತಿಂಗಳ ಹಿಂದೆ ಅಡಿಕೆ ಗಿನಗಳನ್ನು ನೆಟ್ಟಿದ್ದರು. ಆದರೆ, ಕಳೆದ ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಬೆಳೆ ನಾಶವಾಗುತ್ತಿದೆ. ತಾವು ನಷ್ಟದ ಸುಳಿಯಲ್ಲಿದ್ದೇವೆಂದು ಅವರು ಅಳಲು ತೋಡಿಕೊಂಡಿದ್ದಾರೆ.
ಬೆಳೆ ನಷ್ಟದ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಅವರು, “ಹೊಳೆಯ ದಂಡಿಯಲ್ಲಿ 4 ಎಕರೆ ಜಮೀನಿನಲ್ಲಿ ಅಡಿಕೆ ಕೃಷಿ ಮಾಡುತ್ತಿದ್ದೇವೆ. ನಿರಂತರ ಮಳೆಯಿಂದ ಹೊಳೆ ತುಂಬಿ ಜಮೀನು ಕೂಡ ನೀರಿನಲ್ಲಿ ಮುಳುಗಿದೆ. ಬೆಳೆ ನಷ್ಟವಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ವಿನಂತಿಸಿದ್ದಾರೆ.