ತುಮಕೂರು | ಸಿದ್ಧಾರ್ಥ ರೇಡಿಯೋ ಕೇಂದ್ರಕ್ಕೆ ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಭೇಟಿ 

Date:

Advertisements

ತುಮಕೂರು ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ 90.8 ಸಿಆರ್  ಎಸ್‌ಗೆ  ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು ನಿರ್ಮಾಣ ಕುರಿತ ಒಂದು ದಿನ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

ಮಾಧ್ಯಮ ವಿದ್ಯಾರ್ಥಿಗಳಿಗೆ ಬೇಕಾದ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಾರ್ಯಗಳನ್ನು ಮಾಡುವ ಕುರಿತು ತಜ್ಞ ಪ್ರಾಧ್ಯಾಪಕರಿಂದ ತರಬೇತಿ ನೀಡಲಾಯಿತು. 

ರೇಡಿಯೋ ಕುರಿತಾಗಿ ನಿರ್ಮಾಣ ಪೂರ್ವ, ನಿರ್ಮಾಣ ಮತ್ತು ನಿರ್ಮಾಣೋತ್ತರ ಕುರಿತು ಮಾಹಿತಿ ಪಡೆದುಕೊಂಡರು. ರೇಡಿಯೋ ನಿರೂಪಣೆ, ಹಿನ್ನೆಲೆ ಧ್ವನಿ ಮತ್ತು ಬಾನುಲಿಯ ವಿವಿಧ ಕಾರ್ಯಕ್ರಮ ನಿರ್ಮಾಣ ಕುರಿತಂತೆ ಮಾಹಿತಿ ನೀಡಲಾಯಿತು. ಜತೆಗೆ ಪ್ರಯೋಗಿಕವಾಗಿ ವಿದ್ಯಾರ್ಥಿಗಳೇ ರೇಡಿಯೋ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಿಸಲಾಯಿತು. ಹಿನ್ನೆಲೆ ಧ್ವನಿ, ಕಾರ್ಯಕ್ರಮ ನಿರ್ಮಾಣ, ಸಂಕಲನ ಸ್ವತಃ ತಯಾರಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.

Advertisements
1001671257

 ಇದೇ ವೇಳೆ ಸಿದ್ಧಾರ್ಥ ಟಿ.ವಿ. ಕೇಂದ್ರಕ್ಕೂ ಭೇಟಿ ನೀಡಿ, ಸ್ಟುಡಿಯೋ ಕ್ಯಾಮರಾ ಬಳಕೆ ಮಾಡುವುದು, ಸ್ಟುಡಿಯೋ ಸೆಟ್‌ಅಪ್, ಟಿ.ವಿ ಕಾರ್ಯ್ರಮ ನಿರ್ಮಾಣ ಕುರಿತು ತರಬೇತಿ ಪಡೆದುಕೊಂಡರು.

ಸೇಂಟ್ ಪೌಲ್ಸ್ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ 20 ವಿದ್ಯಾರ್ಥಿಗಳ ತಂಡ ಈ ಶೈಕ್ಷಣಿಕ ಭೇಟಿಯಲ್ಲಿ ಭಾಗವಹಿಸಿತ್ತು. ವಿದ್ಯಾರ್ಥಿಗಳೊಂದಿಗೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ಪ್ರಶಾಂತ್ ವೇಣುಗೋಪಾಲ್, ಅಧ್ಯಾಪಕರಾದ ವಿನೋದ್ ಕುಮಾರ್ ಪಾಲ್ಗೊಂಡಿದ್ದರು.

ಸಮುದಾಯ ರೇಡಿಯೋ ಕಾರ್ಯಾಚರಣೆಗಳು ಮತ್ತು ಅದರ ಸಾಮಾಜಿಕ ಪ್ರಸ್ತುತತೆಗೆ ಕುರಿತು ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಾರ್ಯಾಗಾರ ಮತು ಸಂವಾದದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನದ ಕೇಂದ್ರದ ನಿರ್ದೇಶಕರಾದ ಡಾ. ಬಿ.ಟಿ. ಮುದ್ದೇಶ್, ಸಹಾಯಕ ಪ್ರಾಧ್ಯಾಪಕರಾದ ಶ್ವೇತಾ ಎಂ.ಪಿ.ಕಿರಣ್ ಸಿ ಎನ್, ನವೀನ್ ಎನ್ ಜಿ, ರೇಡಿಯೋ ಸಿದ್ಧಾರ್ಥ 90.8 ಎಫ್ ಎಂ ನ ಕಾರ್ಯಕ್ರಮ ನಿರ್ಮಾಣ ಸಹಾಯಕರಾದ ಗೌತಮ್ ಎ ವಿ ಮತ್ತು ಮಾಧ್ಯಮ ವಿದ್ಯಾರ್ಥಿಗಳು ಉಪಸ್ಥಿತರಿದ್ದರು 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X