ಬೆಂಗಳೂರು ವಿಶ್ವವಿದ್ಯಾಲಯದ ಶಾಸನಬದ್ಧ ಹುದ್ದೆಗಳ ನೇಮಕಾತಿ ವಿಷಯದಲ್ಲಿ ವಿಶ್ವವಿದ್ಯಾಲಯದ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆಕ್ಷೇಪಿಸಿರುವ ಹತ್ತು ಮಂದಿ ದಲಿತ ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಜವಾಬ್ದಾರಿಗಳಿಗೆ ರಾಜೀನಾಮೆ ಘೋಷಿಸಿದ್ದಾರೆ.
ಈ ಕುರಿತು ಕುಲಪತಿಯವರಿಗೆ ಪತ್ರ ಬರೆದಿರುವ ಪ್ರಾಧ್ಯಾಪಕರು ತಮಗಾಗಿರುವ ಅನ್ಯಾಯವನ್ನು ಪ್ರಾಸ್ತಾಪಿಸಿದ್ದಾರೆ. “ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ ಸುಮಾರು ವರ್ಷಗಳಿಂದ ದಲಿತ ಶಿಕ್ಷಕರು ತಮ್ಮ ಶೈಕ್ಷಣಿಕ ಜವಾಬ್ದಾರಿ ಹೊರತುಪಡಿಸಿ, ಹಲವಾರು ಆಡಳಿತ ಹುದ್ದೆಗಳ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನಿರ್ವಹಿಸುತ್ತಾ, ಆಡಳಿತ ವರ್ಗಕ್ಕೆ ಹೊರೆಯನ್ನು ಕಡಿಮೆಗೊಳಿಸಿ, ವಿಶ್ವವಿದ್ಯಾಲಯದ ಸರ್ವತೋಮುಖ ಬೆಳವಣಿಗೆಗೆ ದುಡಿಯುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಿಶ್ವವಿದ್ಯಾಲಯದ ಶಾಸನಬದ್ಧ ಹುದ್ದೆಗಳ ನೇಮಕಾತಿ ವಿಷಯದಲ್ಲಿ ವಿಶ್ವವಿದ್ಯಾಲಯದ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ನಾವು ಆಕ್ಷೇಪಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿರಿ: ಸಿಎಸ್ ವಿರುದ್ಧ ಮಾನಹಾನಿ ಹೇಳಿಕೆ: ರವಿಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿಗೆ ‘ಒಡನಾಡಿ’ ಪತ್ರ
“ನಮಗೆ ನೀಡಿದ ಎಲ್ಲಾ ಹಚ್ಚುವರಿ ಜವಾಬ್ದಾರಿಯನ್ನು ಕೇವಲ ಉಸ್ತುವಾರಿ ಎಂದು ಆದೇಶ ನೀಡಿ, ಈ ಜವಾಬ್ದಾರಿಗಳಿಗೆ ಈ ಹಿಂದೆ ಅನುಸರಿಸಿದಂತೆ ಸಹಜವಾಗಿ ನಮ್ಮ ನಮ್ಮ ಖಾತೆಗಳಿಗೆ ಸಂದಾಯವಾಗಬೇಕಿದ್ದ EL ಅನ್ನು ತಪ್ಪಿಸುವ ವ್ಯವಸ್ಥೆ ನಡೆದಿದೆ. ಈ ಬಗ್ಗೆ ನಮ್ಮ ಹಿಂದಿನ ಮನವಿಗಳಿಗೆ ಆಡಳಿತ ವರ್ಗದಿಂದ ಯಾವುದೇ ರೀತಿಯ ಮನ್ನಣೆ ದೊರೆಯುತ್ತಿರುವುದಿಲ್ಲ. ಆದುದರಿಂದ ನಮ್ಮ ಬೇಡಿಕೆಗೆ ಕೂಡಲೇ ಪುರಸ್ಕಾರ ನೀಡದಿದ್ದಲ್ಲಿ ನಮ್ಮ ಜವಾಬ್ದಾರಿಗಳಿಗೆ ನಾವು ರಾಜೀನಾಮೆ ಸಲ್ಲಿಸಿದ್ದೇವೆಂದು ಭಾವಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.
ಅಂಬೇಡ್ಕರ್ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ಸಿ.ಸೋಮಶೇಖರ್, ಬಾಬು ಜಗಜೀವನರಾಂ ಸಂಶೋಧನಾ ಕೇಂದ್ರದ ಪ್ರೊ. ವಿಜಯಕುಮಾರ್ ಎಚ್ ದೊಡ್ಡಮನಿ, ವಿದ್ಯಾರ್ಥಿಗಳ ಕಲ್ಯಾಣ ನಿರ್ದೇಶಕ ಪ್ರೊ. ನಾಗೇಶ್ ಪಿ.ಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋಶದ ವಿಶೇಷಾಧಿಕಾರಿ ಪ್ರೊ. ಕೃಷ್ಣಮೂರ್ತಿ ಜಿ, PM-USHA ಸಂಯೋಜನಕರಾದ ಪ್ರೊ. ಸುದೇಶ್ ವಿ, ದೂರ ಮತ್ತು ಆನ್ಲೈನ್ ಶಿಕ್ಷಣ ಕೇಂದ್ರದ ನಿರ್ದೇಶಕ ಪ್ರೊ. ಮುರಳೀಧರ ಬಿ.ಎಲ್, ಮಾಳವೀಯ ಶಿಕ್ಷಕರ ತರಬೇತಿ ಸಂಸ್ಥೆ ನಿರ್ದೇಶಕ ಪ್ರೊ. ಶಶಿಧರ್ ಎಂ., ಪ್ರಸಾರಾಂಗ ನಿರ್ದೇಶಕ ಪ್ರೊ. ರಮೇಶ, ಸಮಾನ ಅವಕಾಶ ಕೋಶದ ನಿರ್ದೇಶಕ ಡಾ. ಸುರೇಶ್ ಆರ್, ಬ್ರೈಲ್ ಸೆಂಟರ್ ನಿರ್ದೇಶಕ ಡಾ. ಕುಂಬಿನರಸಯ್ಯ ಎಸ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ
ದಲಿತ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯಗಳನ್ನು ಒಬ್ಬ ಪ್ರಾಧ್ಯಾಪಕ ಯೋಚನೆ ಸಹ ಮಾಡುವುದಿಲ್ಲ… ಅವರ ಸ್ವಂತ ಲಾಭಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ ಅವರಿಗೆ ವಿದ್ಯಾರ್ಥಿಗಳ ಉದ್ದಾರ ಕ್ಕಿಂತ ವೈಯಕ್ತಿಕ ಉದ್ದಾರವೇ ಮುಖ್ಯ
ಪ್ರಾದೇಶಿಕ ಭಿನ್ನತೆ ಈರ್ಷೆ ವೈಯಕ್ತಿಕ ಧ್ವೇಷ ಸ್ವಜಾತಿ ಪ್ರೇಮ ಮತ್ತು ಜಾತಿ ಜಾತಿಗೆ ವೈರಿ ದುಡ್ಡು ಮೋಸ ಅಧಿಕಾರದ ದುರುಪಯೋಗ ವೈಯಕ್ತಿಕ ಲಾಭ ಅಧಿಕಾರದ ಚುಕ್ಕಾಣಿಗೆ ಏನು ಬೇಕಾದರೂ ಮಾಡಲು ಸಿದ್ಧ ಆ ಸಂದರ್ಭದಲ್ಲಿ ಅಮಾಯಕ ವಿದ್ಯಾರ್ಥಿಗಳನ್ನು ಬಳಸಿಕೊಂಡು ಅವರ ಜೀವನ ಪೂರ್ತಿ ಮುಳುಗಿ ಬಿಡುತ್ತಾರೆ…
ದಯವಿಟ್ಟು ಇವರ ರಾಜೀನಾಮೆ ಯನ್ನು ಸ್ವೀಕರಿಸಿ, ಇವರೆಲ್ಲ ಹೆಸರಿಗಷ್ಟೇ ದಲಿತ ಪ್ರಾದ್ಯಾಪಕರು, ದಲಿತ ವಿದ್ಯಾರ್ಥಿಗಳಿಗೆ ಅನ್ಯಾಯ ಆದಾಗ ಇವರು ಯಾವುದೇ ಪ್ರಶ್ನೆ ಮಾಡುವುದಿಲ್ಲ. ವಿಶ್ವವಿದ್ಯಾಲಯ ದಲ್ಲಿ ಸುಧಾರಣೆ ಕ್ರಮಗಳನ್ನು ಕೈಗೊಳ್ಳುವ ನೆಪದಲ್ಲಿ ದಲಿತ ವಿದ್ಯಾರ್ಥಿ ಗಳ ಮೇಲೆ ನಡೆದ ಶೋಷಣೆ ಗೆ ಇವರುಗಳ ಪರೋಕ್ಷ ಬೆಂಬಲ ಇತ್ತು. ಈ ಬಗ್ಗೆ ಉಸಿರೇ ಎತ್ತದ ಇವರ ರಾಜೀನಾಮೆ ಪಡೆದು ಜವಾಬ್ದಾರಿ ಯಿಂದ ವಿಶ್ವ ವಿದ್ಯಾಲಯ ಮುಕ್ತ ಗೊಳಿಸಲಿ. ಹಾಗೆ ದಲಿತ ವಿದ್ಯಾರ್ಥಿ ಗಳು ಯಾರೂ ಇವರ ಬೆಂಬಲಕ್ಕೆ ನಿಲ್ಲಬೇಡಿ ವಂದನೆಗಳು.