ಬೆಳಗಾವಿ : ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ಪಿಎಸ್‌ಐ ಅಮಾನತು

Date:

Advertisements

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಸಂಬಂಧವಾಗಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ನಿಖಿಲ್ ಕಾಂಬಳೆ ಅವರನ್ನು ಅಮಾನತು ಮಾಡಲಾಗಿದೆ.

ಜುನ್ 26 ರಂದು ಶ್ರೀರಾಮ ಸೇನೆ ಕಾರ್ಯಕರ್ತರು ಗೋವು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಗೋವುಗಳನ್ನು ಗೋ ಶಾಲೆಗೆ ಸಾಗಿಸಿದರೂ, ಪ್ರಕರಣ ದಾಖಲಿಸುವಲ್ಲಿ ವಿಫಲವಾಗಿದ್ದರು. ಜೊತೆಗೆ, ಸಂಬಂಧಿಸಿದ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿಲ್ಲ ಎಂದು ಆರೋಪಿಸಲಾಗಿದೆ.

ಇದೇ ಸಂದರ್ಭ, ಜಿಲ್ಲೆಯಿಂದ ಗಡೀಪಾರಾಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತನೂ ಆಗಿರುವ ರೌಡಿಶೀಟರ್ ಮಹಾವೀರ ಎಂಬಾತನನ್ನು ಯಾವುದೇ ಕ್ರಮವಿಲ್ಲದೇ ಬಿಡುಗಡೆ ಮಾಡಲಾಗಿದೆ. ಈ ಎಲ್ಲಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಪಿಎಸ್‌ಐ ಕಾಂಬಳೆ ಅವರನ್ನು ಅಮಾನತು ಮಾಡುವ ಆದೇಶ ಮಂಗಳವಾರ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisements

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ಪ್ರೇಮಿಗಳ ದಾರುಣ ಅಂತ್ಯ: ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ

ಈ ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಕಾರ್ಯಪದ್ಧತಿ ಮತ್ತು ನಿಷ್ಠೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಧಿಕಾರಿಗಳ ವಿರುದ್ಧ ಕ್ರಮ ಜರುಗುವ ಸಾಧ್ಯತೆ ಇದೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಇಂದು ತಂಪು ವಾತಾವರಣ – ಮಧ್ಯಮ ಮಳೆಯ ಮುನ್ಸೂಚನೆ

ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಆವರಿಸಿಕೊಂಡಿದ್ದು, ಹವಾಮಾನ ಇಲಾಖೆ ಮಧ್ಯಮ ಮಳೆಯ...

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

Download Eedina App Android / iOS

X