ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಶುಕ್ರವಾರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ವಿಚಾರಣೆಗಳನ್ನು ಜುಲೈ 29ಕ್ಕೆ ಮುಂದೂಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಧಿಕೃತ ಪ್ರಕಟಣೆ ತಿಳಿಸಿದೆ.
“ಗೌರವಾನ್ವಿತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು 28.07.2023 ರಂದು (ಶುಕ್ರವಾರ) ನ್ಯಾಯಾಲಯದ ಕಲಾಪ ನಡೆಸುವುದಿಲ್ಲ. ಆದ ಕಾರಣ, ನ್ಯಾಯಾಲಯದ ಮೊದಲ ಕೊಠಡಿಯಲ್ಲಿ ನಡೆಯಬೇಕಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವಿಚಾರಣೆಗಳನ್ನು ರದ್ದುಗೊಳಿಸಲಾಗಿದೆ. ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಏಕಸದಸ್ಯ ಪೀಠದ ಜೊತೆಗೆ ಕಚೇರಿಯ ವಿಷಯಗಳನ್ನು ನಿರ್ವಹಿಸುತ್ತಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಳೆದ 5 ವರ್ಷಗಳಲ್ಲಿ ಐಐಟಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಮೊಟಕುಗೊಳಿಸಿದ 25 ಸಾವಿರ ಎಸ್ಸಿ,ಎಸ್ಟಿ ವಿದ್ಯಾರ್ಥಿಗಳು
ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮನವಿಗಳ ಬ್ಯಾಚ್ ಹಾಗೂ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋದ ಪ್ರಕರಣ ನಾಳೆಗೆ ಮುಂದೂಡಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿಯ ವಿಚಾರಣೆ, ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಪ್ರಕರಣ ಸೇರಿದಂತೆ ಪ್ರಮುಖ ಪ್ರಕರಣಗಳನ್ನು ಮುಂದೂಡಲಾಗಿದೆ.