ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.
ವಿಡಿಯೋ ಚಿತ್ರೀಕರಣ ಆರೋಪದ ಮೇಲೆ ಉಡುಪಿಯ ಮಲ್ಫೆ ಪೊಲೀಸರು, ಮೂವರು ವಿದ್ಯಾರ್ಥಿನಿಯರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣ ಸಂಬಂಧ ಜಾಮೀನು ಕೋರಿ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್, ಮೂವರು ವಿದ್ಯಾರ್ಥಿನಿಯರಿಗೂ ಜಾಮೀನು ನೀಡಿದೆ.