ಪಾಕ್ ಸೆಲೆಬ್ರಿಟಿಗಳ ಯೂಟ್ಯೂಬ್ ಚಾನೆಲ್‌ಗಳಿಗಿದ್ದ ನಿರ್ಬಂಧ ತೆರವು

Date:

Advertisements

ಭಾರತ-ಪಾಕಿಸ್ತಾನ ಸಂಬಂಧಗಳ ನಡುವಿನ ಸಂಘರ್ಷದ ಮಧ್ಯೆ, ಕೆಲವು ಪಾಕಿಸ್ತಾನಿ ಸೆಲೆಬ್ರಿಟಿಗಳ ಯೂಟ್ಯೂಬ್ ಚಾನೆಲ್‌ ಗಳು ಭಾರತದಲ್ಲಿ ಮತ್ತೆ ವೀಕ್ಷಣೆಗೆ ಲಭ್ಯವಾಗಿವೆ. ಕ್ರಿಕೆಟಿಗರಾದ ಶೋಯೆಬ್ ಅಖ್ತರ್, ಬಾಸಿತ್ ಅಲಿ ಮತ್ತು ರಶೀದ್ ಲತೀಫ್ ಅವರ ಚಾನೆಲ್‌ ಗಳಿಗೆ ಮೂರು ತಿಂಗಳ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಳಿಕ, ಕೇಂದ್ರ ಸರ್ಕಾರ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ ಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು. ಆ ಚಾನೆಲ್‌ ಗಳು ಸೇನೆ ಹಾಗೂ ದೇಶದ ಭದ್ರತಾ ಸಂಸ್ಥೆಗಳ ವಿರುದ್ಧ ಸುಳ್ಳು ಮಾಹಿತಿ ಹರಡಿದ್ದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಮೋದಿ ಕೃಷಿಕರ ಕತ್ತು ಹಿಸುಕಿದ್ದಾರೆ, ಇತ್ತ ಸಿದ್ದು ಕೈ ಜೋಡಿಸಿದ್ದಾರೆ!

Advertisements

ಗೃಹ ಸಚಿವಾಲಯದ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. 16 ಯೂಟ್ಯೂಬ್ ಚಾನೆಲ್‌ಗಳು ಇನ್ನೂ ನಿರ್ಬಂಧಿಸಲಾಗಿದೆ. ಡಾನ್ ನ್ಯೂಸ್ (1.96 ಮಿಲಿಯನ್ ಫಾಲೋವರ್ಸ್), ಸಮಾ ಟಿವಿ (12.7 ಮಿಲಿಯನ್ ಫಾಲೋವರ್ಸ್), ARY ನ್ಯೂಸ್ (14.6 ಮಿಲಿಯನ್ ಫಾಲೋವರ್ಸ್), ಜಿಯೋ ನ್ಯೂಸ್ (18.1 ಮಿಲಿಯನ್ ಫಾಲೋವರ್ಸ್), ಬೋಲ್ ನ್ಯೂಸ್ (7.85 ಮಿಲಿಯನ್ ಫಾಲೋವರ್ಸ್) ಮತ್ತು ಇತರ 11 ಚಾನೆಲ್‌ ಗಳಿಗೆ ಇನ್ನೂ ನಿಷೇಧಿಸಲಾಗಿದೆ.

ಪಾಕಿಸ್ತಾನಿ ನಟಿಯರಾದ ಮಾವ್ರಾ ಹೊಕೇನ್ ಮತ್ತು ಸಬಾ ಕಮರ್ ಅವರ ಇನ್‌ಸ್ಟಾಗ್ರಾಂ ಖಾತೆಗಳು ಕೂಡಾ ಭಾರತದಲ್ಲಿ ಮತ್ತೆ ಲಭ್ಯವಾಗಿವೆ. ಮಂಗಳವಾರ, ಹಲವಾರು ಇನ್‌ಸ್ಟಾಗ್ರಾಮ್ ಬಳಕೆದಾರರು ಈ ಪ್ರೊಫೈಲ್‌ಗಳನ್ನು ವೀಕ್ಷಿಸಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.ಈ ನಡುವೆ, ದಿಲ್ಜಿತ್ ದೋಸಾಂಜ್ ಅಭಿನಯದ ಸರ್‌ದಾರ್ ಜಿ 3 ಚಿತ್ರದ ಭಾಗವಾಗಿರುವ ಹನಿಯಾ ಆಮಿರ್ ಅವರ ಪ್ರೊಫೈಲ್‌ ಗೆ ನಿಷೇಧ ಮುಂದುವರಿದಿದೆ. ಸರ್‌ದಾರ್ ಜಿ 3 ಚಿತ್ರವು ಭಾರತದಲ್ಲಿ ಬಿಡುಗಡೆಯಾಗದಿದ್ದರೂ, ವಿದೇಶಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ನಡುವೆ ನಿರ್ಬಂಧವನ್ನು ತೆರವುಗೊಳಿಸಿದ ಒಂದು ದಿನದ ಒಳಗಾಗಿ ಮತ್ತೆ ನಿರ್ಬಂಧ ವಿಧಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X