ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ನವರಿಂದ ಪಾಠ ಕಲಿಯುವ ಅಗತ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

Date:

Advertisements
  • ಕಾಂಗ್ರೆಸ್‌ ಸರ್ಕಾರ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿಯಾಗಿದೆ
  • ಶಾಸಕರು ಮತ್ತು ಮಂತ್ರಿಗಳ ನಡುವೆ ಸಮನ್ವಯತೆ ಎಂಬುದು ಕಾಣುತ್ತಿಲ್ಲ

ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಸದಾ ಗೊಂದಲ ಸೃಷ್ಟಿ ಮಾಡುತ್ತ ಬಂದಿದೆ. ಈ ಹಿಂದೆ ತಮ್ಮ ಸರ್ಕಾರ ಇದ್ದಾಗ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದಿದ್ದರು. ನಮ್ಮ ಸರ್ಕಾರ ಬಂದಾಗ ಇಲ್ಲ ಎಂದರು. ಇವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾರಾಯಣಸ್ವಾಮಿ ಅವರು ಏನು ಹೇಳಿದ್ದಾರೆ ಎಂಬುದು ನಮಗೆ ಅರ್ಥವಾಗಿದೆ. ಸಂವಿಧಾನದಲ್ಲಿ ಸದ್ಯಕ್ಕೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ. ಆರ್ಟಿಕಲ್‌140 ಅಡಿ ಕ್ಲಾಸ್‌ ಮಾಡಿ ಬಿಲ್‌ ಮಾಡಿ ಎಂದು ನಾವು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಒಳಮೀಸಲಾತಿ ವಿಚಾರ ಈಗಲೂ ಕೋರ್ಟ್‌ನಲ್ಲಿದೆ. ಕಾಂಗ್ರೆಸ್‌ ಸರ್ಕಾರ ಮಾತ್ರ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿ ಇದೆ” ಎಂದು ಟೀಕಿಸಿದರು.

“ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಇಲಾಖೆಯ ಕಾಮಗಾರಿಯಲ್ಲಿ ಅಕ್ರಮ ಕಂಡುಬಂದರೆ ತನಿಖೆ ಮಾಡಲಿ. ಎಸ್‌ಐಟಿಗೆ ಕೊಡಲಿ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುತ್ತದೆ. ಇದನ್ನೇ ಮುಂದಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎಂದರು.

Advertisements

“ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನಾಗಿದೆ ಎಂಬುದು ಅವರ ಆಂತರಿಕ ವಿಚಾರ. ಮಾಧ್ಯಮಗಳಲ್ಲಿ ಆ ಬಗ್ಗೆ ಚರ್ಚೆ ಆಗುತ್ತಿದೆ. ಈ ಸರ್ಕಾರ ರಚನೆಯಾದ ಮೊದಲ ದಿನದಿಂದಲೂ ಗೊಂದಲದಲ್ಲಿದೆ. ಶಾಸಕರು ಮತ್ತು ಮಂತ್ರಿಗಳ ನಡುವೆ ಸಮನ್ವಯತೆ ಎಂಬುದು ಕಾಣುತ್ತಿಲ್ಲ. ಅದಕ್ಕಾಗಿಯೇ ಈ ಸಭೆ ಮಾಡಿದ್ದಾರೆ. ಎಲ್ಲವೂ ಸರಿಯಿದ್ದರೆ ಹೈ ಕಮಾಂಡ್‌ ಇವರಿಗೆ ಬುಲಾವ್‌ ನೀಡುತ್ತಿರಲಿಲ್ಲ” ಎಂದು ಹೇಳಿದರು.

“ವರ್ಗಾವಣೆ ದಂಧೆ ವಿಚಾರವಾಗಿ ಅವರ ಶಾಸಕರೇ ದೊಡ್ಡಮಟ್ಟದಲ್ಲಿ ಧ್ವನಿ ಎತ್ತಿದ್ದಾರೆ. ಹಿರಿಯ ಶಾಸಕರಿಗೆ ಈ ಪರಿಸ್ಥಿತಿ ಬಂದರೆ ಇನ್ನು, ನೂತನ ಶಾಸಕರ ಕಥೆ ಏನು” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ಉಡುಪಿ ಪ್ರಕರಣ

“ಹೆಣ್ಣು ಮಕ್ಕಳ ವಿಚಾರದಲ್ಲಿ ಅವರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಯನ್ನು ಗೃಹಮಂತ್ರಿಗಳು ಕೊಟ್ಟಿದ್ದಾರೆ. ಇಷ್ಟು ಹಗುರವಾಗಿ ಸಚಿವರು ಮಾತನಾಡಬಾರದು. ಇಡೀ ಸರ್ಕಾರವೇ ತಲೆತಗ್ಗಿಸಬೇಕಾದ ಸಂಗತಿ ಇದು. ವಿಡಿಯೋ ಪ್ರಕರಣದಲ್ಲಿ ತನಿಖೆಯಾಗಲಿ. ಸತ್ಯ ಹೊರೆಗೆ ಬರಲಿ. ಅಲ್ಲಿ ಏನೂ ನಡೆಯದೇ ಇದ್ದರೆ ಆ ಮೂವರು ವಿದ್ಯಾರ್ಥಿನಿಯರ ತಪ್ಪೊಪ್ಪಿಗೆ ಹೇಳಿಕೆ ಯಾಕೆ ಪಡೆಯಬೇಕು? ಇದರ ಅರ್ಥ ಪ್ರಕರಣವನ್ನು ಇಲ್ಲಿಗೆ ಮುಚ್ಚಿಹಾಕುವ ಯತ್ನ” ಎಂದು ಆರೋಪಿಸಿದರು.

“ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣವಾಗಿ ಪ್ರತಿಕ್ರಿಯಿಸಿ, ಸರ್ಕಾರ ಇಲ್ಲಿ ಕೂಡ ಗೊಂದಲ ಮಾಡುತ್ತಿದೆ. ರೈತ ಹೋರಾಟಗಳೇ ಬೇರೆ. ಈ ಪ್ರಕರಣಗಳೇ ಬೇರೆ. ಕನ್ನಡಕ್ಕಾಗಿ ಹೋರಾಟ ಮಾಡಿದವರ ಕೇಸ್‌ ಮರಳಿ ಪಡೆಯುವುದರಲ್ಲಿ ನಮ್ಮ ತಕರಾರು ಇಲ್ಲ. ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾದವರನ್ನು ದಂಗೆಕೋರರು ಎನ್ನದೆ ಏನು ಹೇಳಬೇಕು? ಮತರಾಜಕಾರಣಕ್ಕೆ ಈ ರೀತಿ ನಡೆದುಕೊಳ್ಳುತ್ತಿದೆ ಈ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X